ಮೇಷ
ತುರ್ತು ವಿಷಯಕ್ಕಾಗಿ ಸಂಬಂಧಿಕರ ನೆರವು ಪಡೆಯಬೇಕಾದಿತು. ಸಂಸಾರದಲ್ಲಿ ನೆಮ್ಮದಿ. ಅನಗತ್ಯ ಸುತ್ತಾಟದಿಂದಾಗಿ ದೇಹಾಲಸ್ಯ ಉಂಟಾಗಬಹುದು. ಗುರುದೇವತಾ ದರ್ಶನ ಮಾಡುವ ಸಾಧ್ಯತೆ.
ವೃಷಭ
ಹೊಸ ಉದ್ಯಮದ ಕೆಲಸಗಳು ಪೂರ್ಣಗೊಂಡು ನೆಮ್ಮದಿ. ಮಕ್ಕಳಿಗೆ ವಿವಾಹ ವಿಷಯದಲ್ಲಿ ನೆಂಟರಿಂದ ಒತ್ತಾಯಪೂರ್ವಕ ಪ್ರಸ್ತಾಪಗಳು ಬರಲಿವೆ. ಸಾಲದಿಂದ ಮುಕ್ತಿ ಹೊಂದಿ ನಿರಾಳತೆ ಅನುಭವಿಸುವಿರಿ.
ಮಿಥುನ
ತರಕಾರಿ, ಹಣ್ಣುಗಳ ವ್ಯಾಪಾರಿಗಳಿಗೆ ಬಹು ಬೇಡಿಕೆಯಿಂದಾಗಿ ಅಧಿಕ ಲಾಭ. ಪತ್ನಿ ವರ್ಗದವರ ಮನೆಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡುವ ಸಾಧ್ಯತೆ. ಧಾನ್ಯ ವ್ಯಾಪಾರಿಗಳಿಗೆ ಹಿನ್ನೆಡೆ.
ಕಟಕ
ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳ ಆಗಮನದಿಂದ ಸಂತಸ. ಸಂಬಂಧಿಕರೊಂದಿಗೆ ಸುದೀರ್ಘ ಆಪ್ತ ಸಮಾಲೋಚನೆಯಿಂದಾಗಿ ಬಾಂಧವ್ಯ ವೃದ್ಧಿಯಾಗಲಿದೆ.
ಸಿಂಹ
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬ್ಯಾಂಕ್ ಮುಂತಾದ ಹಣಕಾಸು ಸಂಸ್ಥೆಗಳ ಮೊರೆ ಹೊಗಬೇಕಾದಿತು. ದೂರದ ಪ್ರಯಾಣ ಮಾಡಬೇಕಾದೀತು. ಸ್ವಂತ ವಾಹನ ಖರೀದಿಯಿಂದ ನೆಮ್ಮದಿ ಕಾಣುವಿರಿ.
ಕನ್ಯಾ
ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ನಿಮ್ಮ ಸಹಾಯ ಸಲಹೆ ಕೋರಿ ಬರುವವರಿಗೆ ಸಹಾಯ ನೀಡಿ.
ತುಲಾ
ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ ಮಾಡಬೇಕಾದೀತು. ಪತ್ನಿ ವರ್ಗದವರಿಂದ ಸಹಾಯ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳು ನಿವಾರಣೆಯಾಗಲಿವೆ.
ವೃಶ್ಚಿಕ
ಚಿನ್ನಾಭರಣಗಳ ವ್ಯವಹಾರ ಪ್ರಾರಂಭಿಸಲು ಉತ್ತಮ ದಿನ. ಲೆಕ್ಕಪತ್ರ ಪರಿಶೀಲನೆಯಲ್ಲಿ ಹೆಚ್ಚಿನ ಕಾಲ ಕಳೆಯಬೇಕಾದಿತು. ಉತ್ತಮ ಆದಾಯವನ್ನು ಹೊಂದುವಿರಿ. ಪುಸ್ತಕ, ಗ್ರಂಥಗಳ ಖರೀದಿ ವೆಚ್ಚವನ್ನು ಭರಿಸಬೇಕಾದೀತು.
ಧನು
ಸತ್ಪುರುಷರ ಸಂದರ್ಶನ ಮಾಡುವ ಸಾಧ್ಯತೆ ಕಂಡುಬರುತ್ತಿದೆ. ಅಧ್ಯಯನದಲ್ಲಿಯ ಆಸಕ್ತಿಯಿಂದಾಗಿ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಮಾರ್ಗವಾಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಮಕರ
ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ. ಲೋಕೋಪಯೋಗಿ ಇಲಾಖೆ, ತಾಂತ್ರಿಕ ಇಲಾಖೆಯ ಕಂಪ್ಯೂಟರ್ ವಿಭಾಗದವರಿಗೆ ಭತ್ಯೆಯಲ್ಲಿ ಹೆಚ್ಚಳ.
ಕುಂಭ
ವೈಯಕ್ತಿಕ ವಿಚಾರಗಳತ್ತ ಹೆಚ್ಚಿನ ಗಮನ ಹರಿಸಬೇಕಾದೀತು. ನೆರೆಯವರೊಂದಿಗೆ ಸ್ನೇಹ–ಸಂಬಂಧಗಳು ವೃದ್ಧಿಯಾಗಲಿವೆ. ಮನೆ ಬದಲಾವಣೆ ವಿಚಾರ ಚರ್ಚೆಗೆ ಬರಲಿದೆ. ಪ್ರಯಾಣದಿಂದಾಗಿ ದೇಹಾಯಾಸ.
ಮೀನ
ಜಮೀನಿನ ಕೆಲಸ–ಕಾರ್ಯಗಳು ಭರದಿಂದ ಸಾಗುವುದರ ಜೊತೆಗೆ ಕಾಮಗಾರಿಗಳು ಹೆಚ್ಚಳಗೊಳ್ಳುವವು. ಹಣಕಾಸು ಸಂಸ್ಥೆಗಳಿಂದ ಸಹಾಯ ಪಡೆಯುವ ಅವಶ್ಯಕತೆ ನೀಗಲಿದೆ.