
ಉಡುಪಿಯ ಸಮ್ಮೇಳ ಪೂರ್ಣಕಾಲಿಕ ಯಕ್ಷಗಾನ ಕಲಾವಿದರಿಗೆ ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಅಕ್ಕಿ ಹಾಗೂ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.
ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ “ಸಮ್ಮೇಳದ” ಪದಾಧಿಕಾರಿಗಳಾದ ಸತೀಶ್ ಉಪಾಧ್ಯ ಅಂಬಲಪಾಡಿ, ಗಣೇಶ್ ಶೆಣೈ ಇವರಿಗೆ ಕಿಟ್ ಗಳನ್ನು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ಹಸ್ತಾಂತರಿಸಿದರು.
ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಕೆ. ಉದಯಕುಮಾರ್ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಸಹ ವಕ್ತಾರ ಗುರುಪ್ರಸಾದ್ ಶೆಟ್ಟಿ, ರಮಾಕಾಂತ ದೇವಾಡಿಗ ಮುಂತಾದವರಿದ್ದರು.
ಲಾಕ್ ಡೌನ್ ಆರಂಭವಾಗಿ ಕಳೆದ 65 ದಿನಗಳಿಂದ ಟ್ರಸ್ಟ್ ನಿರಂತರವಾಗಿ ಆಹಾರ ಧಾನ್ಯಗಳನ್ನು ನೀಡುತ್ತಾ ಬರುತ್ತಿದ್ದು ಜೂನ್ 8 ರ ವರೆಗೂ ಈ ಕಾರ್ಯ ಮುಂದುವರಿಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಕೆ. ಉದಯಕುಮಾರ್ ಶೆಟ್ಟಿ ಹೇಳಿದರು. ಅಲ್ಲದೆ ಅಶಕ್ತರಿಗೆ ಉಚಿತ ಔಷಧಿ ನೀಡುವ ಕೆಲಸ ನಿರಂತರವಾಗಿ ಮುಂದುವರಿಯಲಿದೆ ಎಂದರು.ಸಂಸದೆ ಶೋಭಾ ಕರಂದ್ಲಾಜೆ ಟ್ರಸ್ಟ್ ನ ಸಮಾಜಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.