ರಾಜ್ಯದಲ್ಲಿ ಇಂದು ಕಿಲ್ಲರ್ ಕರೋನಾಗೆ ಇಬ್ಬರು ಬಲಿ : ಸಾವಿನ ಸಂಖ್ಯೆ 66ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 161 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ. ಇವರಲ್ಲಿ 2605 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3248 ಆಗಿದೆ.  ಅಲ್ಲದೇ ಇಂದು ಬೆಂಗಳೂರು ನಗರ ಮತ್ತು ಕಲಬುರ್ಗಿಯಲ್ಲಿ ಒಬ್ಬೊಬ್ಬರು ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ರಾಜ್ಯದಲ್ಲಿ ಇಂದು 161 ಜನರಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಬೆಂಗಳೂರು ನಗರದಲ್ಲಿ ಪಿ.4316 ಸೋಂಕಿತ 65 ವರ್ಷದ ಮಹಿಳೆಯವರು ಜೂನ್ 3ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಮಧುಮೇಹ, ರಕ್ತದೊತ್ತಡ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಮಹಿಳೆ 08-06-2020ರಂದು ಸಾವನ್ನಪ್ಪಿದ್ದು, ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.

Leave a comment

Design a site like this with WordPress.com
Get started