

ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 204 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಇವರಲ್ಲಿ 2976 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3195 ಆಗಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಇಬ್ಬರು, ರಾಯಚೂರಿನಲ್ಲಿ ಒಬ್ಬರು ಕೊರೋನಾಗೆ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಯಾದಗಿರಿ -66, ಉಡುಪಿ -22, ಬೆಂಗಳೂರು ನಗರ -17, ಕಲಬುರ್ಗಿ – 16, ರಾಯಚೂರು – 15, ಬೀದರ್ – 14, ಶಿವಮೊಗ್ಗ – 10, ದಾವಣೆಗೆರ -09, ಕೋಲಾರ – 06, ಮೈಸೂರು – 05, ರಾಮನಗರ -05, ವಿಜಯಪುರ – 04, ಬಾಗಲಕೋಟೆ -03, ಉತ್ತರಕನ್ನಡ -03, ದಕ್ಷಿಣ ಕನ್ನಡ -02, ಹಾಸನ -02, ಧಾರವಾಡ -02, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಪ್ಪಳದಲ್ಲಿ ತಲಾ ಒಂದೊಂದು ಕೊರೋನಾ ಕೇಸ್ ಪತ್ತೆಯಾಗುವ ಮೂಲಕ ಇಂದು 204 ಜನರಿಗೆ ಕೊರೋನಾ ದೃಢಪಟ್ಟಿದೆ. ಅಲ್ಲದೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾದ್ರೇ, 2976 ಜನ ಕೊರೋನಾ ಸೋಂಕಿತರು ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತ ಸಕ್ರೀಯ ಜನರ ಸಂಖ್ಯೆ 3195 ಆಗಿದೆ.null
ಬೆಂಗಳೂರು ನಗರದ ಪಿ.6020 ಸೋಂಕಿತ 35 ವರ್ಷದ ವ್ಯಕ್ತಿ, ಐಎಲ್ಐ ಮೂಲಕ ಕೊರೋನಾ ಸೋಂಕು ಪತ್ತೆಯಾಗಿತ್ತು. ಇವರಿಗೆ ಲಿವರ್ ಸಮಸ್ಯೆ ಕೂಡ ಇತ್ತು. ಜೂನ್ 7ರಂದು ನಗರದ ನಿಗಧಿತ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ವ್ಯಕ್ತಿ ಜೂ.10ರಂದು ಮರಣ ಹೊಂದಿದ್ದಾರೆ.
ಬೆಂಗಳೂರಿನ ಪಿ.6029 ಸೋಂಕಿತ 60 ವರ್ಷದ ವ್ಯಕ್ತಿಯೊಬ್ಬರು ಐಎಲ್ಐ ಮೂಲಕ ಕೊರೋನಾ ಸೋಂಕು ಪತ್ತೆಯಾಗಿತ್ತು. ಇವರು ಡಿಎಂ ಮತ್ತು ಐಹೆಚ್ ಡಿ ಹಿನ್ನಲೆಯಲ್ಲಿ ಜೂನ್ 6ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವ್ಯಕ್ತಿಯ ಜೂನ್ 11ರ ಇಂದು ಸಾವನ್ನಪ್ಪಿದ್ದಾರೆ.null
ಇನ್ನೂ ರಾಯಚೂರಿನ ಪಿ.6207 ಸೋಂಕಿತ 28 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೂ ಕೊರೋನಾ ಸೋಂಕು ತಗುಲಿತ್ತು. ಮೇ 30ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಜೂನ್ 8ರಂದು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.