ರಾಜ್ಯದಲ್ಲಿ ಇನ್ನೊಂದು ಸಾರಿ ಲಾಕ್ ಡೌನ್ ಹೇರಿಕೆ ಇಲ್ಲ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮತ್ತೆ ಜಾರಿಗೊಳಿಸಲಾಗುತ್ತದೆ ಎಂಬ ಹೇಳಲಾಗುತಿತ್ತು. ಆದರೆ ಬಿಎಸ್‌ವೈ ಈ ಊಹಾಪೋಹವನ್ನು ನಿರಾಕರಿಸಿದ್ದಾರೆ. ಆದರೆ ಜನರು ಎಚ್ಚರಿಕೆಯಿಂದ ಇರಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

Leave a comment

Design a site like this with WordPress.com
Get started