Design a site like this with WordPress.com
Get started

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೂರ್ಯಗೃಹಣ ಪ್ರಯುಕ್ತ ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 21ರ ಭಾನುವಾರದಂದು ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಭಾನುವಾರ ಸೂರ್ಯಗ್ರಹಣ ಇರುವ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲು ಮಾಡಲಾಗಿದ್ದು, ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮಂಜುನಾಥ ಸ್ವಾಮಿ ದರ್ಶನ ಇಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಹೀಗಾಗಿ ಬೆಳಗ್ಗೆ 5.30ಯಿಂದ 9 ಗಂಟೆಯವರಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಸಂಜೆ 4ರಿಂದ ರಾತ್ರಿ 9ರವರೆಗೆContinue reading “ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೂರ್ಯಗೃಹಣ ಪ್ರಯುಕ್ತ ದೇವರ ದರ್ಶನ ಸಮಯದಲ್ಲಿ ಬದಲಾವಣೆ”

ರಾಜ್ಯದಲ್ಲಿಂದು ತ್ರಿಶತಕದ ಗಡಿ ದಾಟಿದ ಕೊರೋನಾ

ರಾಜ್ಯದಲ್ಲಿ ಇವತ್ತು ಒಂದೇ ದಿನ 317 ಮಂದಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 7530 ಕ್ಕೆ ಏರಿಕೆಯಾಗಿದೆ. 2976 ಸಕ್ರಿಯ ಪ್ರಕರಣಗಳು ಇದ್ದು, 72 ಮಂದಿ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 322 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಇದುವರೆಗೆ 4456 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 7 ಮಂದಿ ಮೃತಪಟ್ಟಿದ್ದು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಸೋಂಕಿತರಲ್ಲಿContinue reading “ರಾಜ್ಯದಲ್ಲಿಂದು ತ್ರಿಶತಕದ ಗಡಿ ದಾಟಿದ ಕೊರೋನಾ”

ಮಳೆಗಾಲ ಅಂತ್ಯದವರೆಗೂ ಆಗುಂಬೆ ಘಾಟಿಯಲ್ಲಿ ಘನವಾಹನಗಳ ಸಂಚಾರ ನಿರ್ಬಂಧ

 ರಾಷ್ಟ್ರೀಯ ಹೆದ್ದಾಗಿ 169ಎ ತೀರ್ಥಹಳ್ಳಿ -ಉಡುಪಿ -ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೂ.15 ರಿಂದ ಅಕ್ಟೋಬರ್ 15ರವರೆಗೆ 12 ಟನ್‍ಗಿಂತ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಸೂಚನೆ ನೀಡಲಾಗಿದೆ. ರಾಷ್ಟ್ರಿಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಸಾರಿಗೆ ಅಧಿಕಾರಿಗಳ ವರದಿಯಂತೆ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆContinue reading “ಮಳೆಗಾಲ ಅಂತ್ಯದವರೆಗೂ ಆಗುಂಬೆ ಘಾಟಿಯಲ್ಲಿ ಘನವಾಹನಗಳ ಸಂಚಾರ ನಿರ್ಬಂಧ”

ಶಾಸಕರಿಂದ ಆದಿ ಉಡುಪಿಯ ಎ.ಪಿ.ಎಂ.ಸಿ ದಿನವಹಿ ಮಾರುಕಟ್ಟೆಯ ಉದ್ಘಾಟನೆ

ಇಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಆದಿ ಉಡುಪಿಯಲ್ಲಿರುವ ಎ.ಪಿ.ಎಂ.ಸಿ. ದಿನವಹಿ ಮಾರುಕಟ್ಟೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಹಿಂದೆ ಸದ್ರಿ ಮಾರುಕಟ್ಟೆಯಲ್ಲಿ ವಾರದಲ್ಲಿ ಬುಧವಾರದ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಗಿತ್ತು, ಇಂದಿನಿಂದ ಅಂಬಾಗಿಲು, ಬೀಡಿನಗುಡ್ಡೆ ಭಾಗದ ಬೀದಿಗಳಲ್ಲಿ ತರಕಾರಿ ವ್ಯಾಪಾರ ಮಾಡುತ್ತಿರುವವರನ್ನು ಮತ್ತು ಹೋಲ್ಸೇಲ್ ವ್ಯಾಪಾರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿ ಅವರಿಗೆ ಇಲ್ಲಿ ದಿನನಿತ್ಯದ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಮತ್ತು ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಹಾಗೂ ಇದಕ್ಕೆ ಶ್ರಮಿಸಿದ ಎ.ಪಿ.ಎಂ.ಸಿ ಆಡಳಿತContinue reading “ಶಾಸಕರಿಂದ ಆದಿ ಉಡುಪಿಯ ಎ.ಪಿ.ಎಂ.ಸಿ ದಿನವಹಿ ಮಾರುಕಟ್ಟೆಯ ಉದ್ಘಾಟನೆ”