ಮಳೆಗಾಲ ಅಂತ್ಯದವರೆಗೂ ಆಗುಂಬೆ ಘಾಟಿಯಲ್ಲಿ ಘನವಾಹನಗಳ ಸಂಚಾರ ನಿರ್ಬಂಧ

 ರಾಷ್ಟ್ರೀಯ ಹೆದ್ದಾಗಿ 169ಎ ತೀರ್ಥಹಳ್ಳಿ -ಉಡುಪಿ -ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜೂ.15 ರಿಂದ ಅಕ್ಟೋಬರ್ 15ರವರೆಗೆ 12 ಟನ್‍ಗಿಂತ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಸೂಚನೆ ನೀಡಲಾಗಿದೆ. ರಾಷ್ಟ್ರಿಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಸಾರಿಗೆ ಅಧಿಕಾರಿಗಳ ವರದಿಯಂತೆ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಅಧಿಕ ಭಾರದ ವಾಹನಗಳು ಪರ್ಯಾಯವಾಗಿ ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ-ಕೆರೆಕಟ್ಟೆ, ಕಾರ್ಕಳ-ಉಡುಪಿ ಮಂಗಳೂರು ಮಾರ್ಗವಾಗಿ ಮತ್ತು ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ ಎಂದು ಹೇಳಲಾಗಿದೆ.

Leave a comment

Design a site like this with WordPress.com
Get started