ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೂರ್ಯಗೃಹಣ ಪ್ರಯುಕ್ತ ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 21ರ ಭಾನುವಾರದಂದು ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ.

ಭಾನುವಾರ ಸೂರ್ಯಗ್ರಹಣ ಇರುವ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲು ಮಾಡಲಾಗಿದ್ದು, ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮಂಜುನಾಥ ಸ್ವಾಮಿ ದರ್ಶನ ಇಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಹೀಗಾಗಿ ಬೆಳಗ್ಗೆ 5.30ಯಿಂದ 9 ಗಂಟೆಯವರಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಸಂಜೆ 4ರಿಂದ ರಾತ್ರಿ 9ರವರೆಗೆ ದರ್ಶನಕ್ಕೆ ಅವಕಾಶ ಕೊಡಲಾಗಿದೆ ಎಂದು ಪ್ರಕರಣೆಯಲ್ಲಿ ತಿಳಿಸಿದೆ.

Leave a comment

Design a site like this with WordPress.com
Get started