


ರಾಜ್ಯದಲ್ಲಿ ಇಂದು ಕೂಡ ಕಿಲ್ಲರ್ ಕೊರೋನಾಗೆ ಬಲಿಯಾಗುವವರ ಸಂಖ್ಯೆ ಮುಂದುವರೆದಿದೆ. ಇಂದು ರಾಜ್ಯದಲ್ಲಿ ಐವರು ಕೊರೋನಾ ಸೋಂಕಿನಿಂದಾಗಿ ಬಲಿಯಾಗಿದ್ದಾರೆ. ಅಲ್ಲದೇ ಇಂದು ಒಂದೇ ದಿನ 249 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾದ್ರೇ, ಸಾವಿನ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 249 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇದುವರೆಗೆ ಸೋಂಕಿತರಾದಂತ 5730 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯ ಕೊರೋನಾ ಸೋಂಕಿತರ ಸಂಖ್ಯೆ 3523 ಆಗಿದೆ ಎಂದು ತಿಳಿಸಿದೆ.
ಇನ್ನೂ ಇಂದು ಬೆಂಗಳೂರು ನಗರದಲ್ಲಿ ಪಿ.9276, ಪಿ.9299, ಪಿ.9362 ಸೋಂಕಿತರು ಸಾವನ್ನಪ್ಪಿದ್ದರೇ, ಬಳ್ಳಾರಿಯಲ್ಲಿ ಪಿ.7732 ಹಾಗೂ ರಾಮನಗರದಲ್ಲಿ ಪಿ.9237 ಸೋಂಕಿತರು ಸೇರಿ ಒಟ್ಟು ಐವರು ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 142ಕ್ಕೆ ಏರಿಕೆಯಾಗಿರುವುದಾಗಿ ತಿಳಿದು ಬಂದಿದೆ.