
ಪ್ರತಾಪ್ ಸಿಂಹ ನಾಯಕ್ ಪಕ್ಷದ ಪ್ರಾಮಾಣಿಕ ಮತ್ತು ನಿಷ್ಠಾವಂತ ಕಾರ್ಯಕರ್ತರಾಗಿದ್ದವರು, ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅಂತವರಿಗೆ ಸ್ಥಾನಮಾನ ನೀಡುತ್ತಿರುವ ಘಟನೆಗಳು ರಾಜಕೀಯದಲ್ಲಿ ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಸಾಧ್ಯ. ಭಾರತೀಯ ಜನತಾ ಪಕ್ಷಕ್ಕೆ ವಿಧಾನಪರಿಷತ್ತಿಗೆ ಪ್ರತಾಪ್ ಸಿಂಹ ನಾಯಕ್ ದೊಡ್ಡ ಆಸ್ತಿ ಯಾಗುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದ ಶಾಸಕರು ವಿಶೇಷವಾಗಿ ಶುಭ ಹಾರೈಸಿದರು.
ಇಂದು ದಿನಾಂಕ 25-06-2020 ರಂದು ಜಿಲ್ಲಾ ಬಿಜೆಪಿ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್ ರವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಸದಾನಂದ ಉಪ್ಪಿನಕುದ್ರು ಮತ್ತು ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.