ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬುಧವಾರ ಮತ್ತೆ 8 ಮಂದಿ ಬಲಿಯಾಗಿದ್ದಾರೆ. ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್ ನಿಂದಾಗಿ ಬುಧವಾರದಂದು ಬೆಂಗಳೂರಿನಲ್ಲಿ ಐವರು, ಶಿವಮೊಗ್ಗ, ಬಳ್ಳಾರಿ ಹಾಗೂ ಬೀದರ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹಿತಿ ನೀಡಿದೆ.
Monthly Archives: June 2020
ದಕ್ಷಿಣ ಕನ್ನಡದಲ್ಲಿ ಬುಧವಾರ 8 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಉಡುಪಿಯಲ್ಲಿ ಮತ್ತೆ 4 ಮಂದಿಯಲ್ಲಿ ಕೊರೋನಾ ದೃಢ
ದ.ಕ ಜಿಲ್ಲೆಯಲ್ಲಿ ಮತ್ತೆ 8 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 4 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಇಂದು 8 ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸದ್ಯ ಜಿಲ್ಲೆಯಲ್ಲಿ 225 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 4 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಮೂವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದು, ಓರ್ವನಿಗೆ P-5451ರ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಇಂದು 87 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 134 ಮಂದಿ ಸೋಂಕಿತರು ಚಿಕಿತ್ಸೆContinue reading “ದಕ್ಷಿಣ ಕನ್ನಡದಲ್ಲಿ ಬುಧವಾರ 8 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಉಡುಪಿಯಲ್ಲಿ ಮತ್ತೆ 4 ಮಂದಿಯಲ್ಲಿ ಕೊರೋನಾ ದೃಢ”
ಜೂನ್ 17,2020; ಇಂದಿನ ರಾಶಿ ಭವಿಷ್ಯ
ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ಏಕಾದಶಿ ತಿಥಿ ಉಪರಿ ದ್ವಾದಶಿ ತಿಥಿ,ಬುಧವಾರ, ಭರಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:24 ರಿಂದ 2:00ಗುಳಿಕಕಾಲ: ಬೆಳಗ್ಗೆ 10:48 ರಿಂದ 12:24ಯಮಗಂಡಕಾಲ: ಬೆಳಗ್ಗೆ 7:36 ರಿಂದ 9:12 ಮೇಷ: ಪರಿಶ್ರಮಕ್ಕೆ ತಕ್ಕ ಫಲ ಲಭಿಸುವುದು, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ, ಮನಸ್ಸಿನಲ್ಲಿ ಗೊಂದಲ. ವೃಷಭ: ಅಧಿಕಾರಿಗಳಿಂದ ಪ್ರಶಂಸೆ, ಕೋರ್ಟ್ ಕೇಸ್‍ಗಳಲ್ಲಿ ಜಯ, ಮಿತ್ರರು ಮೋಸ ಮಾಡುವ ಸಾಧ್ಯತೆ, ವ್ಯವಹಾರಗಳಲ್ಲಿ ಎಚ್ಚರ, ಅತಿಯಾಗಿ ಯಾರನ್ನೂ ನಂಬಬೇಡಿ. ಮಿಥುನ: ಸ್ತ್ರೀಯರಿಗೆ ತಾಳ್ಮೆ ಅತ್ಯಗತ್ಯ,Continue reading “ಜೂನ್ 17,2020; ಇಂದಿನ ರಾಶಿ ಭವಿಷ್ಯ”
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೂರ್ಯಗೃಹಣ ಪ್ರಯುಕ್ತ ದೇವರ ದರ್ಶನ ಸಮಯದಲ್ಲಿ ಬದಲಾವಣೆ
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 21ರ ಭಾನುವಾರದಂದು ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಭಾನುವಾರ ಸೂರ್ಯಗ್ರಹಣ ಇರುವ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲು ಮಾಡಲಾಗಿದ್ದು, ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮಂಜುನಾಥ ಸ್ವಾಮಿ ದರ್ಶನ ಇಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಹೀಗಾಗಿ ಬೆಳಗ್ಗೆ 5.30ಯಿಂದ 9 ಗಂಟೆಯವರಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಸಂಜೆ 4ರಿಂದ ರಾತ್ರಿ 9ರವರೆಗೆContinue reading “ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೂರ್ಯಗೃಹಣ ಪ್ರಯುಕ್ತ ದೇವರ ದರ್ಶನ ಸಮಯದಲ್ಲಿ ಬದಲಾವಣೆ”
ರಾಜ್ಯದಲ್ಲಿಂದು ತ್ರಿಶತಕದ ಗಡಿ ದಾಟಿದ ಕೊರೋನಾ
ರಾಜ್ಯದಲ್ಲಿ ಇವತ್ತು ಒಂದೇ ದಿನ 317 ಮಂದಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 7530 ಕ್ಕೆ ಏರಿಕೆಯಾಗಿದೆ. 2976 ಸಕ್ರಿಯ ಪ್ರಕರಣಗಳು ಇದ್ದು, 72 ಮಂದಿ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 322 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಇದುವರೆಗೆ 4456 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 7 ಮಂದಿ ಮೃತಪಟ್ಟಿದ್ದು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಸೋಂಕಿತರಲ್ಲಿContinue reading “ರಾಜ್ಯದಲ್ಲಿಂದು ತ್ರಿಶತಕದ ಗಡಿ ದಾಟಿದ ಕೊರೋನಾ”
ಮಳೆಗಾಲ ಅಂತ್ಯದವರೆಗೂ ಆಗುಂಬೆ ಘಾಟಿಯಲ್ಲಿ ಘನವಾಹನಗಳ ಸಂಚಾರ ನಿರ್ಬಂಧ
ರಾಷ್ಟ್ರೀಯ ಹೆದ್ದಾಗಿ 169ಎ ತೀರ್ಥಹಳ್ಳಿ -ಉಡುಪಿ -ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೂ.15 ರಿಂದ ಅಕ್ಟೋಬರ್ 15ರವರೆಗೆ 12 ಟನ್‍ಗಿಂತ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಸೂಚನೆ ನೀಡಲಾಗಿದೆ. ರಾಷ್ಟ್ರಿಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಸಾರಿಗೆ ಅಧಿಕಾರಿಗಳ ವರದಿಯಂತೆ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆContinue reading “ಮಳೆಗಾಲ ಅಂತ್ಯದವರೆಗೂ ಆಗುಂಬೆ ಘಾಟಿಯಲ್ಲಿ ಘನವಾಹನಗಳ ಸಂಚಾರ ನಿರ್ಬಂಧ”
ಶಾಸಕರಿಂದ ಆದಿ ಉಡುಪಿಯ ಎ.ಪಿ.ಎಂ.ಸಿ ದಿನವಹಿ ಮಾರುಕಟ್ಟೆಯ ಉದ್ಘಾಟನೆ
ಇಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಆದಿ ಉಡುಪಿಯಲ್ಲಿರುವ ಎ.ಪಿ.ಎಂ.ಸಿ. ದಿನವಹಿ ಮಾರುಕಟ್ಟೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಹಿಂದೆ ಸದ್ರಿ ಮಾರುಕಟ್ಟೆಯಲ್ಲಿ ವಾರದಲ್ಲಿ ಬುಧವಾರದ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಗಿತ್ತು, ಇಂದಿನಿಂದ ಅಂಬಾಗಿಲು, ಬೀಡಿನಗುಡ್ಡೆ ಭಾಗದ ಬೀದಿಗಳಲ್ಲಿ ತರಕಾರಿ ವ್ಯಾಪಾರ ಮಾಡುತ್ತಿರುವವರನ್ನು ಮತ್ತು ಹೋಲ್ಸೇಲ್ ವ್ಯಾಪಾರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿ ಅವರಿಗೆ ಇಲ್ಲಿ ದಿನನಿತ್ಯದ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಮತ್ತು ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಹಾಗೂ ಇದಕ್ಕೆ ಶ್ರಮಿಸಿದ ಎ.ಪಿ.ಎಂ.ಸಿ ಆಡಳಿತContinue reading “ಶಾಸಕರಿಂದ ಆದಿ ಉಡುಪಿಯ ಎ.ಪಿ.ಎಂ.ಸಿ ದಿನವಹಿ ಮಾರುಕಟ್ಟೆಯ ಉದ್ಘಾಟನೆ”
ರಾಜ್ಯದಲ್ಲಿ ಇನ್ನೊಂದು ಸಾರಿ ಲಾಕ್ ಡೌನ್ ಹೇರಿಕೆ ಇಲ್ಲ
ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮತ್ತೆContinue reading “ರಾಜ್ಯದಲ್ಲಿ ಇನ್ನೊಂದು ಸಾರಿ ಲಾಕ್ ಡೌನ್ ಹೇರಿಕೆ ಇಲ್ಲ”
ರಾಜ್ಯ ಪೋಲಿಸ್ ಇಲಾಖೆಯಲ್ಲಿ ಕೊರೋನಾ ಆಟಾಟೋಪ
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಡೆಡ್ಲಿ ಕೊರೊನಾ ತಗುಲುತ್ತಿದೆ. ಈವರೆಗೆ 65 ಜನ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಲುಲಿದೆ. ಅದರಲ್ಲಿ ಸುಮಾರು 31 ಸಕ್ರಿಯ ಪ್ರಕರಣಗಳು ಇದ್ದು, ಉಳಿದವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೋಮ್ಮಾಯಿ ತಿಳಿಸಿದ್ದಾರೆ. ವಿಶೇಷವಾಗಿ ಕೆಎಸ್ಆರ್ ಪಿ ಪೊಲೀಸ್ ಸಿಬ್ಬಂದಿಗಳು ನಿಪ್ಪಾಣಿ, ಪಾದರಾಯನಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸೋಂಕು ಹರಡುವ ಸಾಧ್ಯತೆ ಅಧಿಕವಾಗಿದ್ದು, ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು. ಕೊರೋನಾ ವಾರಿಯರ್ಸ್Continue reading “ರಾಜ್ಯ ಪೋಲಿಸ್ ಇಲಾಖೆಯಲ್ಲಿ ಕೊರೋನಾ ಆಟಾಟೋಪ”
ಎಸ್.ಎಸ್.ಎಲ್.ಸಿ ಪರೀಕ್ಷೆ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ:, ಪೋಷಕರು ಅತಂಕ ಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಜೂನ್ 15 (ಕರ್ನಾಟಕ ವಾರ್ತೆ): ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನೀಡಿರುವ ಸೂಚನೆಗಳಂತೆ ರಚಿಸಲಾಗಿರುವ ಎಸ್.ಓ.ಪಿ. ಅನ್ವಯ ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿContinue reading “ಎಸ್.ಎಸ್.ಎಲ್.ಸಿ ಪರೀಕ್ಷೆ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ:, ಪೋಷಕರು ಅತಂಕ ಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಜಿ.ಜಗದೀಶ್”