
ಉಡುಪಿ: ಜಿಲ್ಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶೀತಜ್ವರ ರೋಗ ಲಕ್ಷಣ ಇರುವವರರಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸಮುದಾಯ ಮಟ್ಟದಲ್ಲಿ ಸೋಂಕು ಹರಡಿರುವ ಭೀತಿ ಸೃಷ್ಟಿಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಡಾ.ಟಿಎಂಎ ಪೈ ಆಸ್ಪತ್ರೆಯ ತಜ್ಞ ವೈದ್ಯ ಡಾ.ಶಶಿಕಿರಣ್ ಉಮಾಕಾಂತ್.