
ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತಗಳು, ಪ್ರಧಾನಿ ನರೇಂದ್ರ ಮೋದಿ ಕಾರ್ಯ ವೈಖರಿ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಜನಪರ ಆಡಳಿತ ಮತ್ತು ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಅಂಬಲಪಾಡಿ ಪರಿಸರದ ಕಾಂಗ್ರೆಸ್ ನಾಯಕರಾದ ಶಿವಾಜಿ ಸನಿಲ್ ಬಂಕೇರ್ಕಟ್ಟ ಮತ್ತು ಸುಮಂತ್ ಪ.ಜಾ. ಕಾಲನಿ ಇವರು ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪಕ್ಷದ ಧ್ವಜವನ್ನು ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಅಂಬಲಪಾಡಿ ಗ್ರಾ.ಪಂ. ಚುನಾವಣಾ ಉಸ್ತುವಾರಿ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಜಿಲ್ಲಾ ಎಸ್.ಸಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯ ಅನಿಲ್ ರಾಜ್ ಅಂಚನ್ ಅಂಬಲಪಾಡಿ, ಗ್ರಾ.ಪಂ. ಚುನಾವಣಾ ಸಹ ಉಸ್ತುವಾರಿ ರೋಷನ್ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ್ ಕರ್ಕೇರ, ಬೂತ್ ಅಧ್ಯಕ್ಷರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್ ಹಾಗೂ ಗ್ರಾಮ ಪಂಚಾಯತ್ ಚುನಾವಣಾ ಅಭ್ಯರ್ಥಿಗಳು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.