
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಶರದೃತು, ಕಾರ್ತಿಕ ಮಾಸ,
ಕೃಷ್ಣಪಕ್ಷ,ದ್ವಾದಶಿ/ತ್ರಯೋದಶಿ,
ಶನಿವಾರ,ವಿಶಾಖ ನಕ್ಷತ್ರ,
ರಾಹುಕಾಲ: 09 :25ರಿಂದ 10:51
ಗುಳಿಕಕಾಲ: 06:34 ರಿಂದ 07:59
ಯಮಗಂಡಕಾಲ: 01:42 ರಿಂದ 03:08
ಮೇಷ
ಸರ್ಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆಯ ಸಾಧ್ಯತೆ ಗಾಢವಾಗಿ ಕಂಡುಬರುತ್ತಿದೆ. ನೌಕರವರ್ಗಕ್ಕೆ ಕೆಲಸಗಳಿಂದ ವಿರಾಮ. ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವುದು ಒಳ್ಳೆಯದು.
ವೃಷಭ
ಸರ್ಕಾರಿ ಕೆಲಸದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ–ಕಾರ್ಯಗಳಿಂದಾಗಿ ಸಂಗಾತಿಯ ಕೋಪವನ್ನು ಎದುರಿಸಬೇಕಾದೀತು. ಮನೆಯವರ ಪ್ರಯಾಣಕ್ಕಾಗಿ ವಿಶೇಷ ವೆಚ್ಚ ಭರಿಸಬೇಕಾದೀತು.
ಮಿಥುನ
ಗೃಹನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಉತ್ತಮವಾದ ಕಾಲ. ಮನಸ್ಸಿಟ್ಟು ಕೆಲಸವನ್ನು ಮಾಡಿದಲ್ಲಿ ವಿದೇಶಿ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸುವಿರಿ. ಭೂ ಖರೀದಿ ವ್ಯವಹಾರವನ್ನು ಮಾಡಲು ಸಕಾಲ.
ಕಟಕ
ಕೆಲಸ–ಕಾರ್ಯಗಳಲ್ಲಿ ಅನುಕೂಲ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ವಿಶ್ವಾಸದಿಂದ ಉದ್ಯೋಗ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವುದರಿಂದ ಹೆಚ್ಚಿನ ಲಾಭ.
ಸಿಂಹ
ಉನ್ನತ ಅಧ್ಯಯನಕ್ಕೆ ಉತ್ತೇಜನ ದೊರೆತು ವಿದೇಶಕ್ಕೆ ಪ್ರಯಾಣ ಮಾಡುವ ಸಾಧ್ಯತೆ. ಸಾರಾಸಾರ ವಿವೇಚನೆಯಿಂದ ವೈವಾಹಿಕ ಸಮಸ್ಯೆಗಳಿಗೆ ಪರಿಹಾರ. ವಿಶೇಷ ಭೋಜನ ಕೂಟದಲ್ಲಿ ಭಾಗಿಯಾಗುವ ಸಾಧ್ಯತೆ.
ಕನ್ಯಾ
ನಿಮ್ಮ ಒಳ್ಳೆಯತನದ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಿ. ಅವಶ್ಯಕತೆಗಿಂತ ಹೆಚ್ಚಾಗಿ ಹಣಕಾಸಿನ ನೆರವು ದೊರೆಯಲಿದೆ. ಶೀಘ್ರದಲ್ಲೇ ಸಂತೋಷಕರ ಸುದ್ದಿಯೊಂದನ್ನು ಆಲಿಸಲಿದ್ದೀರಿ.
ತುಲಾ
ಉದ್ಯೋಗಾಕಾಂಕ್ಷಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗಾವಕಾಶ ದೊರಕಲಿದೆ. ವಿದೇಶಿ ವ್ಯವಹಾರಸ್ಥರೊಂದಿಗಿನ ಸಂಪರ್ಕದಿಂದಾಗಿ ವ್ಯವಹಾರಕ್ಕೊಂದು ತಿರುವು. ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ವೃಶ್ಚಿಕ
ಉನ್ನತಾಧಿಕಾರಿಗಳ ಅನುಗ್ರಹದಿಂದಾಗಿ ನೌಕರಿಯಲ್ಲಿ ಅನುಕೂಲತೆ. ಸಾಮಾಜಿಕೆ ಸೇವೆಯಲ್ಲಿ ದಿನವಿಡೀ ತೊಡಗಿಕೊಂಡು ಸಂತೋಷವನ್ನು ಅನುಭವಿಸಲಿದ್ದೀರಿ. ಮಕ್ಕಳಿಂದ ಆರ್ಥಿಕ ಸಹಕಾರ ದೊರೆಯುವ ಸಾಧ್ಯತೆ.
ಧನು
ಆರ್ಥಿಕ ಅಡಚಣೆಗಳು ಹಂತಹಂತವಾಗಿ ನಿವಾರಣೆಯಾಗಲಿವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ. ಶಾರೀರಿಕ ಆಯಾಸ ತೋರಿಬಂದರೂ ದಿನದ ಅಂತ್ಯದಲ್ಲಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ.
ಮಕರ
ದೇವತಾನುಗ್ರಹದಿಂದ ಶುಭಕಾರ್ಯಗಳು ನಿಮ್ಮ ಮನದಿಚ್ಛೆಯಂತೆ ನೆರವೇರುವುದರಿಂದ ನೆಮ್ಮದಿ. ಧೈರ್ಯ ಆತ್ಮವಿಶ್ವಾಸ ಮತ್ತು ಪ್ರಯತ್ನ ಬಲದಿಂದಾಗಿ ಕಾರ್ಯಾನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ.
ಕುಂಭ
ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಗ್ರಹವಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಪೂರೈಸಲು ಅನುಕೂಲತೆ ಕೂಡಿಬರಲಿದೆ. ಕೃಷಿ ಕೈಗಾರಿಕಾ ಕ್ಷೇತ್ರದಲ್ಲಿ ಲಾಭಾಂಶ ಹೆಚ್ಛಳವಾಗಲಿದೆ.
ಮೀನ
ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ತೆರೆದುಕೊಳ್ಳುವ ಸಾಧ್ಯತೆ. ನ್ಯಾಯಾಲಯದಲ್ಲಿನ ಕಟ್ಟಳೆಗಳಿಗೆ ಚಾಲನೆ ದೊರಕಲಿದೆ. ಖರೀದಿ ಮಾರಾಟ ವ್ಯವಹಾರಗಳಲ್ಲಿ ಉತ್ತಮ ಲಾಭ.