

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಹಾಗೂ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರಿನ ಉತ್ತರಹಳ್ಳಿ ಹಾಗೂ ರಾಜಾಜಿನಗರದ ಒಟ್ಟು ಮೂವರಿಗೆ ಸೋಂಕು ದೃಢಪಟ್ಟಿದೆ. ಇನ್ನು ಇವರಲ್ಲಿ ಇಬ್ಬರು ತಾಯಿ ಮಗಳು ಅಂತಾ ಹೇಳಲಾಗುತ್ತಿದೆ.