
ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೇಗೌಡರವರು ರಾಜ್ಯಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಧೀಮಂತ ನಾಯಕರು. ಗ್ರಾಮ ಪಂಚಾಯತ್ ಮಟ್ಟದಿಂದ ಮೊದಲ್ಗೊಂಡು ಸಹಕಾರಿ ಕ್ಷೇತ್ರ ಸಹಿತ ರಾಜಕೀಯ ಕ್ಷೇತ್ರದ ವಿವಿಧ ಮಜಲುಗಳಲ್ಲಿ ಪಕ್ಷ ನಿಷ್ಠೆ ಮತ್ತು ಬದ್ಧತೆಯಿಂದ ಜನಸೇವೆಗೈದು ಯಶಸ್ಸಿನ ಉತ್ತುಂಗಕ್ಕೇರಿದ ಜನ ನಾಯಕರು.
ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೆಗೌಡರವರ ಅಕಾಲಿಕ ಅಗಲುವಿಕೆಯು ರಾಜ್ಯಕ್ಕೆ ತುಂಬಲಾರದ ನಷ್ಟವೆನಿಸಿದೆ. ಅವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಎಂಬ ಪ್ರಾರ್ಥನೆಯೊಂದಿಗೆ ಉಡುಪಿ ಜಿಲ್ಲಾ ಬಿಜೆಪಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.