
ಬೆಂಗಳೂರು : ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚು ಹೆಚ್ಚು ಗೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಕರ್ಪ್ಯೂ ಜಾರಿಗೊಳಿಸುವಂತ ಅಗತ್ಯವಿಲ್ಲ ಅಂತ ಹೇಳಿದ್ದಾರೆ. ಇದರ ಮಧ್ಯೆ ಕಂದಾಯ ಸಚಿವ ಆರ್.ಅಶೋಕ್ ಅವರು, ಬ್ರಿಟನ್ ರೂಪಾಂತರ ವೈರಸ್ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದರಿಂದ ಸಂಪೂರ್ಣ ಲಾಕ್ ಡೌನ್ ಜಾರಿಯ ಅಗತ್ಯವಿಲ್ಲ. ಆದ್ರೇ, ಸೋಂಕಿನ ಪ್ರಕರಣಗಳು ಪತ್ತೆಯಾಗಿರುವಂತ ಜಿಲ್ಲೆಗಳಲ್ಲಿ ಮಾತ್ರವೇ ಲಾಕ್ ಡೌನ್ ಜಾರಿಗೊಳಿಸಿದ್ರೆ ಉತ್ತಮ ಎನ್ನಲಾಗುತ್ತಿದೆ. ಆ ಬಗ್ಗೆ ಸಿಎಂ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿನ ಪ್ರಕರಣಗಳು ಪತ್ತಯಾಗಿರುವಂತ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯ ಸುಳಿವನ್ನು ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕಂದಾಯ ಸಚಿವ ಆರ್.ಅಶೋಕ್ ಅವರು, ಬ್ರಿಟನ್ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಮಾಡಬೇಕಾ ಬೇಡವಾ ಎನ್ನುವ ಬಗ್ಗೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಎಲ್ಲಾ ಸಚಿವರು, ಶಾಸಕರ ಅಭಿಪ್ರಾಯ ಕೋರಿದ್ದಾರೆ. ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಇನ್ನೂ ಗೊಂದಲವಿದೆ. ಪೋಷಕರು ಮಕ್ಕಳನ್ನು ಕಳಿಸೋಕೆ ಹಿಂದೇಟು ಹಾಕಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಅಂತಿಮವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಇದುವರೆಗೆ ರಾಜ್ಯದಲ್ಲಿ 11 ಜನರಿಗೆ ಬ್ರಿಟನ್ ರೂಪಾಂತರ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ರೂಪಾಂತರ ವೈರಸ್ ಸೋಂಕು ಪತ್ತೆಯಾದ ನಂತ್ರ ಇಡೀ ರಾಜ್ಯದಲ್ಲೇ ಲಾಕ್ ಡೌನ್ ಮಾಡುವ ಅಗತ್ಯ ಕಂಡು ಬರುತ್ತಿಲ್ಲ. ಸೋಂಕು ಮತ್ತಷ್ಟು ಜನರಿಗೆ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕಿನ ಪ್ರಕರಣಗಳು ಪತ್ತೆಯಾಗಿರುವಂತ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಮಾಡಬಹುದಾಗಿದೆ. ಆ ಬಗ್ಗೆ ಸಿಎಂ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬ್ರಿಟನ್ ವೈರಸ್ ಹಿನ್ನಲೆಯಲ್ಲಿ ಪ್ರಕರಣಗಳು ಪತ್ತೆಯಾಗಿರುವಂತ ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ನಿಯಮ ಜಾರಿಗೊಳ್ಳಲಿದೆ ಎನ್ನುವಂತ ಸುಳಿವು ನೀಡಿದ್ದಾರೆ.