
ಜನವರಿ 12, 2021ರಂದು ರಾಜ್ಯ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ”ದ ಪೂರ್ವಭಾವಿ ಸಭೆಯು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ನಗರ ಬಿಜೆಪಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಮಾವೇಶದ ರೂಪುರೇಷೆಗಳನ್ನು ಸಭೆಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯಕುಮಾರ್ ಶೆಟ್ಟಿ, ನಗರ ಬಿಜೆಪಿ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್, ನಗರಸಭಾ ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್ ಕೊಳ ಹಾಗೂ ಬಿಜೆಪಿ ಉಡುಪಿ ನಗರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಮೀನುಗಾರ ಪ್ರಕೋಷ್ಠದ ಸಂಚಾಲಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಸ್ವಾಗತಿಸಿದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ನಿರೂಪಿಸಿದರು.