ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಉಡುಪಿ ಅಷ್ಟಮಠಗಳಿಂದ ನಿಧಿ ಸಮರ್ಪಣೆ

ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿಯ ಅಷ್ಟಮಠಗಳಿಂದ ನಿಧಿ ಸಮರ್ಪಣೆ ನಡೆಯಿತು.

ಶ್ರೀಕೃಷ್ಣ ಮಠದಲ್ಲಿನ ಚೂರ್ಣೋತ್ಸವದ ಬಳಿಕ ಮಧ್ವ ಮಂಟಪದಲ್ಲಿ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಶ್ರೀಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ನಿಧಿ ಸಮರ್ಪಣೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ವಿ.ಹಿ.ಪ ದ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಬಿ.ಜೆ.ಪಿ.ಯ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಸಂಘ ಪರಿವಾರದ ರಾಮಚಂದ್ರ ಸನಿಲ್, ಸುರೇಶ ಹೆಜಮಾಡಿ, ಗಣಪತಿ ನಾಯಕ್, ಕಿಶೋರ್ ಮೊದಲಾದವರು ಉಪಸ್ಥಿತರಿದ್ದರು

Leave a comment

Design a site like this with WordPress.com
Get started