
ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೋರ್ವರಾದ ಏಕಾತ್ಮ ಮಾನವತಾವಾದದ ಹರಿಕಾರರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನವನ್ನು ಫೆ.11 ರಂದು ಸಮರ್ಪಣಾ ದಿನವಾಗಿ ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಬನ್ನಂಜೆ ಯವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಲಾಯಿತು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯ ಕುಮಾರ್ ಶೆಟ್ಟಿಯವರು ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶಗಳು, ನಿಸ್ವಾರ್ಥ ಮನೋಭಾವದ ಸೇವೆ ಮತ್ತು ಬಲಿದಾನದ ವಿಚಾರಗಳನ್ನು ವಿಸ್ತೃತವಾಗಿ ವಿವರಿಸಿ ಉಪನ್ಯಾಸ ನೀಡಿದರು.
ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನಿಧಿ ಸಮರ್ಪಣೆಯ ಮೂಲಕ ಪಂಡಿತ್ ಜೀ ಯವರಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಉಪಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ನಾಯಕ್, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿಯವರು ಸ್ವಾಗತಿಸಿ, ಸದಾನಂದ ಉಪ್ಪಿನಕುದ್ರುರವರು ವಂದಿಸಿದರು. ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಎಮ್. ಅಂಚನ್ ರವರು ಕಾರ್ಯಕ್ರಮ ನಿರೂಪಿಸಿದರು.