Design a site like this with WordPress.com
Get started

ರಾಜ್ಯವನ್ನು ಅತಿ ಹೆಚ್ಚು ಸಾಲಕ್ಕೆ ತಳ್ಳಿದ್ದ ಮಾಜಿ ಸಿ.ಎಂ. ಸಿದ್ಧರಾಮಯ್ಯ ನೈತಿಕತೆಯ ಪಾಠ ಅನಗತ್ಯ – ಜಿಲ್ಲಾ ಬಿಜೆಪಿ

ತನ್ನ ಆಡಳಿತಾವಧಿಯಲ್ಲಿ ಸಾಲ ಪಡೆಯುವುದರಲ್ಲಿ ಹಿಂದಿನ ಎಲ್ಲಾ ಮುಖ್ಯ ಮಂತ್ರಿಗಳನ್ನು ಮೀರಿಸಿ ರಾಜ್ಯವನ್ನು ಅತಿ ಹೆಚ್ಚು ಸಾಲದ ಕೂಪಕ್ಕೆ ತಳ್ಳಿದ್ದ ಮಾಜಿ ಸಿ.ಎಂ. ಸಿದ್ದರಾಮಯ್ಯ ನೈತಿಕತೆಯ ಪಾಠ ಅನಗತ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಹೇಳಿದೆ. ಸಂವಿಧಾನದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕಾಂಗ್ರೆಸ್ ಸದನದಲ್ಲಿ ಪೂರ್ವ ನಿರ್ಧರಿತವಾಗಿದ್ದ ಒಂದು ರಾಷ್ಟ್ರ ಒಂದು ಚುನಾವಣೆ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸದೆ ಸಭಾತ್ಯಾಗ ಮಾಡಿದ್ದು, ರಾಜ್ಯ ಬಜೆಟ್ ಮಂಡನೆಯ ಸಂದರ್ಭದಲ್ಲೂ ಕ್ಷುಲ್ಲಕ ಕಾರಣ ನೀಡಿ ಸಭಾತ್ಯಾಗ ಮಾಡಿರುವುದು ಕಾಂಗ್ರೆಸ್ ನContinue reading “ರಾಜ್ಯವನ್ನು ಅತಿ ಹೆಚ್ಚು ಸಾಲಕ್ಕೆ ತಳ್ಳಿದ್ದ ಮಾಜಿ ಸಿ.ಎಂ. ಸಿದ್ಧರಾಮಯ್ಯ ನೈತಿಕತೆಯ ಪಾಠ ಅನಗತ್ಯ – ಜಿಲ್ಲಾ ಬಿಜೆಪಿ”

ತೆರಿಗೆ ರಹಿತ ಡಿಸೀಲ್ ಘೋಷಣೆ, ಮೀನುಗಾರ ವರ್ಗದಲ್ಲಿ ಮಂದಹಾಸ – ಕುಯಿಲಾಡಿ ಸುರೇಶ್ ನಾಯಕ್

ರಾಜ್ಯ ಬಜೆಟ್‍ನಲ್ಲಿ ಯಾಂತ್ರೀಕೃತ ದೋಣಿಗಳಿಗೆ ರೂ.1.50 ಲಕ್ಷ ಕಿ.ಲೀ. ಡಿಸೀಲ್ ಮನ್ನಾ, ಮಾರಾಟ ತೆರಿಗೆ ಮರುಪಾವತಿಯ ಬದಲು, ಡಿಸೀಲ್ ಡೆಲಿವರಿ ಕೇಂದ್ರದಲ್ಲಿ ಕರ ರಹಿತ ಡಿಸೀಲ್ ವಿತರಣೆಗೆ ಅನುಮೋದನೆ ನೀಡಿರುವುದು ಕರಾವಳಿಯ ಮೀನುಗಾರ ವರ್ಗದಲ್ಲಿ ಮಂದಹಾಸ ಮೂಡಿಸಿದೆ. ಬಜೆಟ್‍ನಲ್ಲಿ ಸದ್ರಿ ಸೌಲಭ್ಯದ ಘೋಷಣೆಗೈದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ – ಕುಯಿಲಾಡಿ ಸುರೇಶ್ ನಾಯಕ್

ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಲ್ಪಟ್ಟ ಈ ಬಾರಿಯ ರಾಜ್ಯ ಬಜೆಟ್ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಮಹಿಳೆಯರಿಗೆ 6 ತಿಂಗಳ ಹೆಚ್ಚುವರಿ ಹೆರಿಗೆ ರಜೆ, ಮಹಿಳಾ ಕಾರ್ಮಿಕರಿಗೆ ಬಿಎಂಟಿಸಿ ರಿಯಾಯಿತಿ ಪ್ರಯಾಣ, ಎಪಿಎಂಸಿಯಲ್ಲಿ ಮಹಿಳಾ ಮೀಸಲಾತಿ, ಮಹಿಳಾ ಸುರಕ್ಷತೆಗೆ ವಿಶೇಷ ಕ್ರಮ, 2 ಕೋಟಿ ಮಹಿಳೆಯರಿಗೆ ಸ್ವೋಧ್ಯೋಗಕ್ಕಾಗಿ 4% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಮುಂತಾದ ಹಲವು ಘೋಷಣೆಗಳೊಂದಿಗೆ ಮಹಿಳಾContinue reading “ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ – ಕುಯಿಲಾಡಿ ಸುರೇಶ್ ನಾಯಕ್”