
ರಾಜ್ಯ ಬಜೆಟ್‍ನಲ್ಲಿ ಯಾಂತ್ರೀಕೃತ ದೋಣಿಗಳಿಗೆ ರೂ.1.50 ಲಕ್ಷ ಕಿ.ಲೀ. ಡಿಸೀಲ್ ಮನ್ನಾ, ಮಾರಾಟ ತೆರಿಗೆ ಮರುಪಾವತಿಯ ಬದಲು, ಡಿಸೀಲ್ ಡೆಲಿವರಿ ಕೇಂದ್ರದಲ್ಲಿ ಕರ ರಹಿತ ಡಿಸೀಲ್ ವಿತರಣೆಗೆ ಅನುಮೋದನೆ ನೀಡಿರುವುದು ಕರಾವಳಿಯ ಮೀನುಗಾರ ವರ್ಗದಲ್ಲಿ ಮಂದಹಾಸ ಮೂಡಿಸಿದೆ. ಬಜೆಟ್‍ನಲ್ಲಿ ಸದ್ರಿ ಸೌಲಭ್ಯದ ಘೋಷಣೆಗೈದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.
ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿದ್ದ ಮೀನುಗಾರರಿಗೆ ತಕ್ಕಮಟ್ಟಿಗೆ ಅನುಕೂಲಕರವಾದ ನಿರ್ಧಾರ
LikeLike