ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ – ಕುಯಿಲಾಡಿ ಸುರೇಶ್ ನಾಯಕ್

ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಲ್ಪಟ್ಟ ಈ ಬಾರಿಯ ರಾಜ್ಯ ಬಜೆಟ್ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಮಹಿಳೆಯರಿಗೆ 6 ತಿಂಗಳ ಹೆಚ್ಚುವರಿ ಹೆರಿಗೆ ರಜೆ, ಮಹಿಳಾ ಕಾರ್ಮಿಕರಿಗೆ ಬಿಎಂಟಿಸಿ ರಿಯಾಯಿತಿ ಪ್ರಯಾಣ, ಎಪಿಎಂಸಿಯಲ್ಲಿ ಮಹಿಳಾ ಮೀಸಲಾತಿ, ಮಹಿಳಾ ಸುರಕ್ಷತೆಗೆ ವಿಶೇಷ ಕ್ರಮ, 2 ಕೋಟಿ ಮಹಿಳೆಯರಿಗೆ ಸ್ವೋಧ್ಯೋಗಕ್ಕಾಗಿ 4% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಮುಂತಾದ ಹಲವು ಘೋಷಣೆಗಳೊಂದಿಗೆ ಮಹಿಳಾ ಪರ ಬಜೆಟ್ ಎನಿಸಿದರೆ ಹೊಸ ಮಾರುಕಟ್ಟೆಗಳ ವಿಸ್ತರಣೆ, ಆಹಾರ ಸಂಸ್ಕರಣಾ ಘಟಕ ಸ್ಥಾಪನೆ, ಸಾವಯವ ಕೃಷಿಗೆ ಉತ್ತೇಜನ ಮುಂತಾದ ಘೋಷಣೆಗಳೊಂದಿಗೆ ರೈತ ಪರ ಬಜೆಟ್ ಎನಿಸಿದೆ. ಯಾಂತ್ರೀಕೃತ ದೋಣಿಗೆ ತೆರಿಗೆ ರಹಿತ ಡಿಸೀಲ್, ಯಾವುದೇ ಹೊಸ ತೆರಿಗೆಯನ್ನು ವಿಧಿಸದೆ ಮೂಲಭೂತ ಸೌಕರ್ಯಕ್ಕೆ ಆಧ್ಯತೆ ನೀಡಿದ ಬಜೆಟ್. ಆಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ, ಜಿಲ್ಲೆಗೊಂದು ಗೋಶಾಲೆ ಮುಂತಾದ ಯೋಜನೆಗಳೊಂದಿಗೆ ಆರೋಗ್ಯ ಕ್ಷೇತ್ರಕ್ಕೂ ವಿಶೇಷ ಒತ್ತು ನೀಡಿದ ದೂರದರ್ಶಿತ್ವದ ಅಭಿವೃದ್ಧಿ ಪರ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started