
ಪ್ಲವ ಸಂ|ರದ ಮೇಷ ಮಾಸ ದಿನ 14 ಸಲುವ ಚೈತ್ರ ಶುದ್ಧ ಹುಣ್ಣಿಮೆ 7 ಗಳಿಗೆ ದಿನ ವಿಶೇಷ :ಚಿತ್ರಾ ಪೂರ್ಣಿಮಾ ಹನುಮಜ್ಜಯಂತಿ, ಮಹಾನಕ್ಷತ್ರ ಭರಣಿ ಆರಂಭ ನಿತ್ಯ ನಕ್ಷತ್ರ :ಶ್ವಾತಿ 35 ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :3.00-4.30 ಗಂಟೆ ಗುಳಿಕ ಕಾಲ :12.00-1.30 ಗಂಟೆ ಸೂರ್ಯಾಸ್ತ :6.43 ಗಂಟೆ ಸೂರ್ಯೋದಯ :6.13 ಗಂಟೆ
ಮೇಷ
ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳ ಆಗಮನದಿಂದ ಸಂತಸ. ಸಂಬಂಧಿಕರೊಂದಿಗೆ ಸುದೀರ್ಘ ಆಪ್ತ ಸಮಾಲೋಚನೆಯಿಂದಾಗಿ ಬಾಂಧವ್ಯದಲ್ಲಿ ವೃದ್ಧಿ.
ವೃಷಭ
ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರ ಪ್ರಯಾಣ ಮಾಡಬೇಕಾದೀತು. ಪತ್ನಿವರ್ಗದವರಿಂದ ಸಹಾಯ ದೊರಕಲಿದೆ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆ ನಿವಾರಣೆ.
ಮಿಥುನ
ಹೊಸ ಉದ್ಯಮದ ಕೆಲಸಗಳು ಪೂರ್ಣಗೊಂಡು ನೆಮ್ಮದಿ. ಮಕ್ಕಳಿಗೆ ವಿವಾಹ ವಿಷಯದಲ್ಲಿ ನೆಂಟರಿಂದ ಒತ್ತಾಯ ಪೂರ್ವಕ ಪ್ರಸ್ತಾಪಗಳು ಬರಲಿದೆ. ಸಾಲದಿಂದ ಮುಕ್ತಿ ಹೊಂದಿ ನಿರಾಳತೆ.
ಕಟಕ
ಚಿನ್ನಾಭರಣಗಳ ವ್ಯವಹಾರದಲ್ಲಿ ಹಿನ್ನಡೆಯ ದಿನ. ಲೆಕ್ಕಪತ್ರ ಪರಿಶೀಲನೆಯಲ್ಲಿ ಹೆಚ್ಚಿನ ಕಾಲ ಕಳೆಯಬೇಕಾದೀತು. ಉತ್ತಮ ಆದಾಯ ಹೊಂದುವಿರಿ. ಪುಸ್ತಕ ಗ್ರಂಥಗಳ ಖರೀದಿಗಾಗಿ ವೆಚ್ಚವನ್ನು ಭರಿಸಬೇಕಾದೀತು.
ಸಿಂಹ
ತರಕಾರಿ, ಹಣ್ಣುಗಳ ವ್ಯಾಪಾರಸ್ಥರಿಗೆ ಬಹು ಬೇಡಿಕೆಯಿಂದಾಗಿ ಲಾಭ. ಪತ್ನಿ ವರ್ಗದವರ ಮನೆಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡುವ ಸಾಧ್ಯತೆ. ಧಾನ್ಯ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ.
ಕನ್ಯಾ
ವೈಯಕ್ತಿಕ ವಿಚಾರಗಳತ್ತ ಹೆಚ್ಚಿನ ಗಮನ ಹರಿಸಿ. ನೆರೆಯವರೊಂದಿಗೆ ಸ್ನೇಹ ಸಂಬಂಧಗಳು ವೃದ್ಧಿಯಾಗಲಿವೆ. ಮನೆ ಬದಲಾವಣೆ ವಿಚಾರ ಚರ್ಚೆಗೆ ಬರಲಿದೆ. ಅತಿಯಾದ ಪ್ರಯಾಣದಿಂದಾಗಿ ದೇಹಾಯಾಸ.
ತುಲಾ
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬ್ಯಾಂಕ್ ಮುಂತಾದ ಹಣಕಾಸು ಸಂಸ್ಥೆಗಳ ಮೊರಹೊಗಬೇಕಾದೀತು. ದೂರದ ಪ್ರಯಾಣ. ಸ್ವಂತ ವಾಹನ ಖರೀದಿಯಿಂದ ನೆಮ್ಮದಿ ಕಾಣುವಿರಿ.
ವೃಶ್ಚಿಕ
ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ. ಲೋಕೋಪಯೋಗಿ ಇಲಾಖೆ, ತಾಂತ್ರಿಕ ಇಲಾಖೆಯ ಕಂಪ್ಯೂಟರ್ ವಿಭಾಗದವರಿಗೆ ಭತ್ಯೆಯಲ್ಲಿ ಹೆಚ್ಚಳ.
ಧನು
ತುರ್ತು ವಿಷಯಕ್ಕಾಗಿ ಸಂಬಂಧಿಕರ ನೆರವನ್ನು ಪಡೆಯಬೇಕಾದೀತು. ಸಂಸಾರದಲ್ಲಿ ನೆಮ್ಮದಿ. ಅನಗತ್ಯ ಸುತ್ತಾಟದಿಂದಾಗಿ ದೇಹಾಲಸ್ಯ ಉಂಟಾಗಬಹುದು. ಗುರುದೇವತಾ ದರ್ಶನ ಮಾಡುವ ಸಾಧ್ಯತೆ.
ಮಕರ
ಜಮೀನಿನ ಕೆಲಸಗಳು ಭರದಿಂದ ಸಾಗುವುದರ ಜೊತೆಗೆ ಕಾಮಗಾರಿಗಳು ಹೆಚ್ಚಳಗೊಳ್ಳುವವು. ಹಣಕಾಸು ಸಂಸ್ಥೆಗಳಿಂದ ಸಹಾಯ ಪಡೆಯುವ ಅವಶ್ಯಕತೆ ನೀಗಲಿದೆ. ಮನೆಯವರ ದೂರ ಪ್ರಯಾಣ.
ಕುಂಭ
ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ನಿಮ್ಮ ಸಹಾಯ, ಸಲಹೆ ಕೋರಿ ಬರುವವರಿಗೆ ಸಹಾಯ ನೀಡಿ.
ಮೀನ
ತಂದೆ–ತಾಯಿಗಳಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಯೋಗ. ಸತ್ಪುರುಷರ ಸಂದರ್ಶನ ಮಾಡುವ ಸಾಧ್ಯತೆ ಕಂಡುಬರುತ್ತಿದೆ. ಅಧ್ಯಯನದಲ್ಲಿಯ ಆಸಕ್ತಿಯಿಂದಾಗಿ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಮಾರ್ಗವಾಗಲಿದೆ.