

ಉಡುಪಿ : ದೇಶದಾದ್ಯಂತ ಕೊರೋನಾ ಸಾಂಕ್ರಾಮಿಕ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಿರ್ದೇಶನದಂತೆ ಸೇವಾ ಹೀ ಸಂಘಟನ್ ಅಭಿಯಾನ-2 ನ್ನು ಉಡುಪಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕೋವಿಡ್-2.0 ಸಹಾಯವಾಣಿ ಜನತೆಯ ಕೋವಿಡ್ ಸಂಬಂಧಿತ ಸಂಕಷ್ಟಗಳಿಗೆ ಸ್ಪಂದಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಎ.27 ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾ ಕೋವಿಡ್-2.0 ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದರು.
ಉಡುಪಿ ಜಿಲ್ಲಾ ಕೇಂದ್ರದಲ್ಲಿ ಪ್ರಾರಂಭಗೊಂಡಿರುವ ಬಿಜೆಪಿ ಜಿಲ್ಲಾ ಕೋವಿಡ್-2.0 ಸಹಾಯವಾಣಿ ದಿನದ 24 ಗಂಟೆಯೂ ಕೋವಿಡ್ ಸೋಂಕಿತರಿಗೆ ಅಗತ್ಯ ನೆರವು ನೀಡುವಲ್ಲಿ ತುರ್ತು ಸೇವೆ ಸಲ್ಲಿಸಲಿದೆ. ಬಿಜೆಪಿ ಜಿಲ್ಲಾ ಪ್ರಮುಖರನ್ನೊಳಗೊಂಡ ಸಹಾಯವಾಣಿ ತಂಡವನ್ನು ರಚಿಸಲಾಗಿದೆ. ಕೇಂದ್ರ ಸರಕಾರದ ನಿಯಮಾವಳಿಯಂತೆ ಸಂಬಂಧಪಟ್ಟ ನಾಗರಿಕರಿಗೆ ಕೋವಿಡ್ ಲಸಿಕೆ ಪಡೆಯಲು ಸಹಕರಿಸುವುದು, ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಪಡೆದು ಜನತೆಯ ಸಂಕಷ್ಟಕ್ಕೆ ಸ್ಪಂದಿಸುವುದು ಇವೇ ಮುಂತಾದ ತುರ್ತು ಸೇವೆಗಳನ್ನು ಒದಗಿಸುವಲ್ಲಿ ಬಿಜೆಪಿ ಜಿಲ್ಲಾ ಕೋವಿಡ್-2.0 ಸಹಾಯವಾಣಿ ಶ್ರಮಿಸಲಿದೆ ಎಂದು ಕುಯಿಲಾಡಿ ತಿಳಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿ ರಾಜ್ಯ ಬಿಜೆಪಿಯ ಸೂಚನೆಯಂತೆ ಕಳೆದ ವರ್ಷವೂ ಕೋವಿಡ್-19 ರ ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸೇವಾ ಹೀ ಸಂಘಟನ್ ಅಭಿಯಾನದಡಿ ಉಡುಪಿ ಜಿಲ್ಲೆಯಾದ್ಯಂತ ವಿವಿಧ ಜನಪರ ಸೇವೆ ಸಲ್ಲಿಸುವಲ್ಲಿ ಯಶಸ್ಸನ್ನು ಕಂಡಿದೆ. ಅದೇ ರೀತಿ ಕೊರೋನಾ 2ನೇ ಅಲೆಯ ಇಂದಿನ ಸಂಕಷ್ಟದ ದಿನಗಳಲ್ಲಿಯೂ ಬಿಜೆಪಿ ಜಿಲ್ಲಾ ಕೋವಿಡ್-2.0 ಸಹಾಯವಾಣಿ ನೊಂದ ನಾಗರಿಕರಿಗೆ ತುರ್ತು ಸಹಾಯ, ಸಹಕಾರದೊಂದಿಗೆ ಸಾರ್ಥಕ ಸೇವೆ ಸಲ್ಲಿಸುವಂತಾಗಲಿ ಎಂದರು.
ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳು, ಆಕ್ಸಿಜನ್, ವೆಂಟಿಲೇಟರ್, ಅಂಬುಲೆನ್ಸ್, ಕೋವಿಡ್ ಲಸಿಕೆ ಹಾಗೂ ಆಸ್ಪತ್ರೆಗಳ ಪ್ರಮುಖರ ಬಗ್ಗೆ ಮಾಹಿತಿ ಸಂಗ್ರಹಿಸುವುದು, ಕೋವಿಡ್ ಲಸಿಕೆ ಪಡೆಯುವ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಲಸಿಕೆ ಪಡೆಯುವಲ್ಲಿ ಸಹಕರಿಸುವುದು, ರಕ್ತದಾನ ಶಿಭಿರ ಆಯೋಜನೆ ಇವೇ ಮುಂತಾದ ವಿಷಯಗಳ ಬಗ್ಗೆ ವಿಸ್ತ್ರತ ವಿಚಾರ ವಿನಿಮಯ ನಡೆಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರ್ರಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೋದ್‍ರಾಜ್ ಶಾಂತಿನಿಕೇತನ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ ಆತ್ರಾಡಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಜಿಲ್ಲಾ ಅಭಿವೃದ್ಧಿ ಮಾಹಿತಿ ಪ್ರಕೋಷ್ಠದ ಸಂಚಾಲಕ ವಿನೋದ್ ನಾಯಕ್, ಬಿಜೆಪಿ ಉಡುಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಉಪಸ್ಥಿತರಿದ್ದರು