ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮಲ್ಲಿ ಅನೇಕರು ಪರಿವಾರದವರನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾದಂತಹ ಮಹಾಮಾರಿಯನ್ನು ಎಂದೂ ನೋಡಿರಲಿಲ್ಲ. ಎರಡನೆಯ ಅಲೆ ವಿರುದ್ಧ ಹೋರಾಡುತ್ತಿದ್ದೇವೆ. ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ಸಮರೋಪಾದಿಯಲ್ಲಿ ಆರೋಗ್ಯ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ದೇಶದ ಜನ ಸಂಕಷ್ಟ ಎದುರಿಸಿದ್ದಾರೆ. ಜೊತೆಗೆ ಸೋಂಕು ಹೊಡೆದೋಡಿಸಲು ಹೋರಾಟ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಇಡೀ ಜಗತ್ತನ್ನೇ ಕೊರೋನಾ ಸೋಂಕು ಕಂಗೆಡಿಸಿದೆ. ಭಾರತ ತನ್ನContinue reading “ಎಲ್ಲರಿಗೂ ಉಚಿತ ಲಸಿಕೆ, ದೀಪಾವಳಿ ವರೆಗೆ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ“