Design a site like this with WordPress.com
Get started

ರಾಷ್ಟ್ರೀಯ ಹೆದ್ದಾರಿ 66ಗೆ (NH-66) ಕಟಪಾಡಿಯಲ್ಲಿ 22.72 ಕೋಟಿ ರೂಗಳ ವೆಚ್ಚದಲ್ಲಿ ಓವರ್ ಪಾಸ್ (Over Pass) ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಿದ ಕೇಂದ್ರ ಸರಕಾರ. – ಶೋಭಾ ಕರಂದ್ಲಾಜೆ, ಸಂಸದೆ

ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ (NH-66), ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಪ್ರದೇಶದಲ್ಲಿ ಅಂಡರ್ ಪಾಸಿನ ಅವಶ್ಯಕತೆಯಿದೆ ಎಂದು ಕ್ಷೇತ್ರದ ಜನತೆ ಹಲವಾರು ವರುಷಗಳಿಂದ ಬೇಡಿಕೆಯಿಟ್ಟಿದ್ದರು. ಹಲವಾರು ಬಾರಿ ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿಯಾಗಿ ಕಟಪಾಡಿ ನಗರ ಪ್ರದೇಶವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ/ಓವರ್ ಪಾಸ್’ ಅನಿವಾರ್ಯತೆಯಿದೆ ಎಂದು ಮನದಟ್ಟು ಮಾಡಲಾಗಿತ್ತು. ಕ್ಷೇತ್ರದ ಜನರ ಅಪೇಕ್ಷೆಯಂತೆ, ಕೇಂದ್ರ ಸರಕಾರ ಕಟಪಾಡಿಯಲ್ಲಿ ಅಂಡರ್ ಪಾಸಿನ ಬದಲು,Continue reading “ರಾಷ್ಟ್ರೀಯ ಹೆದ್ದಾರಿ 66ಗೆ (NH-66) ಕಟಪಾಡಿಯಲ್ಲಿ 22.72 ಕೋಟಿ ರೂಗಳ ವೆಚ್ಚದಲ್ಲಿ ಓವರ್ ಪಾಸ್ (Over Pass) ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಿದ ಕೇಂದ್ರ ಸರಕಾರ. – ಶೋಭಾ ಕರಂದ್ಲಾಜೆ, ಸಂಸದೆ”

ಕಾಂಗ್ರೆಸ್ ಮುಖಂಡರು ಕಾಶ್ಮೀರಿ ಪಂಡಿತರ ಬಲಿದಾನವನ್ನು ಮರೆತಿದ್ದಾರೆ: ಕುಯಿಲಾಡಿ ಸುರೇಶ್ ನಾಯಕ್ ಖಂಡನೆ

ಕಾಂಗ್ರೆಸ್ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕ್ಲಬ್ ಹೌಸ್ ಆಪ್ ಮೂಲಕ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ದೇಶವಿರೋಧಿ ಮನಸ್ಥಿತಿಯ ನಿದರ್ಶನವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಅದರ ಮುಖಂಡರು ಚೀನಾ ಹಾಗೂ ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿರುವುದು ಇದರಿಂದ ಸ್ಪಷ್ಟಗೊಳ್ಳುತ್ತದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಪ್ರತಿಷ್ಠೆ ಮಣ್ಣು ಪಾಲುContinue reading ಕಾಂಗ್ರೆಸ್ ಮುಖಂಡರು ಕಾಶ್ಮೀರಿ ಪಂಡಿತರ ಬಲಿದಾನವನ್ನು ಮರೆತಿದ್ದಾರೆ: ಕುಯಿಲಾಡಿ ಸುರೇಶ್ ನಾಯಕ್ ಖಂಡನೆ