Design a site like this with WordPress.com
Get started

ಬಿಜೆಪಿ ಸೇವಾ ಕಾರ್ಯಗಳೇ ವಿರೋಧಿಗಳ ಟೀಕೆಗೆ ಸೂಕ್ತ ಉತ್ತರ – ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ಕೋವಿಡ್ ಸಂಕಷ್ಟದಲ್ಲಿರುವ ಜನತೆಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ರೂ.1,250 ಕೋಟಿ ಮತ್ತು ರೂ.500 ಕೋಟಿಗಳ 2 ಪ್ಯಾಕೇಜ್‍ಗಳ ಘೋಷಣೆಯ ಜೊತೆಗೆ ಕೋವಿಡ್‍ನಿಂದಮೃತಪಟ್ಟ ಸದಸ್ಯರ ಬಡ ಕುಟುಂಬಕ್ಕೆ ತಲಾ ರೂ.1 ಲಕ್ಷ ಪರಿಹಾರ ನೀಡುವ ಬಗ್ಗೆ ರೂ.300 ಕೋಟಿಗಳನ್ನು ಮಂಜೂರು ಮಾಡಿರುವುದು ಸ್ವಾಗತಾರ್ಹ. ಬಿಜೆಪಿ ಸೇವಾ ಕಾರ್ಯಗಳೇ ವಿರೋಧ ಪಕ್ಷಗಳ ಟೀಕೆಗಳಿಗೆ ಸಮರ್ಪಕವಾದ ಉತ್ತರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅವರು ರಾಜ್ಯ ಬಿಜೆಪಿಯ ಸೂಚನೆಯಂತೆ ಸೇವಾ ಹೀContinue reading “ಬಿಜೆಪಿ ಸೇವಾ ಕಾರ್ಯಗಳೇ ವಿರೋಧಿಗಳ ಟೀಕೆಗೆ ಸೂಕ್ತ ಉತ್ತರ – ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಮುಖಂಡ, ಸಾಮಾಜಿಕ ಕಾರ್ಯಕರ್ತ ಶಿರ್ವದ ಸುನೀಲ್ ಕಬ್ರಾಲ್ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ

ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ, ಇತ್ತೀಚೆಗೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಪಕ್ಷಕ್ಕಾಗಿ ದುಡಿದ ಶಿರ್ವದ ಸುನೀಲ್ ಕಬ್ರಾಲ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದ ಸದಸ್ಯರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.