
ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:
ಯೋಗಾಭ್ಯಾಸವು ನಮ್ಮ ಭವ್ಯ ಪರಂಪರೆಯ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸ ಇಂದು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜೂನ್ 21ರಂದು ಆಯೋಜಿಸಿದ ಸಾಮೂಹಿಕ ಯೋಗ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಯೋಗದಿಂದ ಉತ್ತಮ ಆರೋಗ್ಯ ಹಾಗೂ ಮಾನಸಿಕ ಸ್ಥಿಮಿತ ಕಾಯ್ದುಕೊಳ್ಳಲು ಸಾಧ್ಯ. ಇಂದಿನ ದಿನಗಳಲ್ಲಿ ವಿಶ್ವದಾದ್ಯಂತ ಪ್ರತಿಯೊಬ್ಬರು ಯೋಗಾಭ್ಯಾಸದ ಕಡೆ ಆಕರ್ಷಿತರಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯೋಗ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್, ವಿಶ್ವ ಯೋಗ ದಿನಾಚರಣೆಯ ಜಿಲ್ಲಾ ಸಂಯೋಜಕರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಡಾ! ವಿಜಯೇಂದ್ರ ವಸಂತ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಸೃಷ್ಠಿ ಫೌಂಡೇಶನ್ ಸಂಸ್ಥಾಪಕಿ, ಯೋಗ ಶಿಕ್ಷಕಿ ಡಾ! ಮಂಜರಿಚಂದ್ರ ಪುಷ್ಪರಾಜ್ ಯೋಗ ತರಬೇತಿ ನೀಡಿದರು.