
ಅಂದು ಅಖಂಡ ಭಾರತದ ಪರಿಕಲ್ಪನೆಗೆ ಬೀಜ ಬಿತ್ತಿದವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು. ಅದನ್ನು ಇಂದು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮತ್ತು 35ಎ ರದ್ದುಗೊಳಿಸುವ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಅಖಂಡ ಭಾರತದ ಕನಸನ್ನು ನನಸಾಗಿಸಿದೆ. ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ದೂರದರ್ಶಿತ್ವದ ಚಿಂತನೆಗಳು, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಜೂನ್ 23ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ! ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಒಂದು ದೇಶದಲ್ಲಿ ಎರಡು ಸಂವಿಧಾನ ಎರಡು ರಾಷ್ಟ್ರ ಧ್ವಜ ಎರಡು ಪ್ರಧಾನಿ ಸಲ್ಲದು ಎಂಬ ನೀತಿಯನ್ನು ಪ್ರತಿಪಾದಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿರಬೇಕೆಂಬ ಚಿಂತನೆಯೊಂದಿಗೆ ನೆಹರೂ ಸಂಪುಟದಲ್ಲಿದ್ದ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ದೇಶದ ಏಕತೆ ಮತ್ತು ಅಖಂಡತೆಗಾಗಿ ಹೋರಾಡಿದ ಅಪ್ಪಟ ದೇಶಪ್ರೇಮಿ.
ಅಧಿಕಾರ ಶಾಶ್ವತವಲ್ಲ, ಅಧಿಕಾರಕ್ಕಾಗಿ ದೇಶದ ಏಕತೆಯನ್ನು ಬಲಿಕೊಡುವುದಿಲ್ಲ ಎಂಬ ವಿಚಾರಧಾರೆಯನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿ, ಅದರಿಂದಲೇ ಅವರ ಬಲಿದಾನವಾಗಿದ್ದು, ಡಾ! ಶ್ಯಾಮ ಪ್ರಸಾದ್ ಮುಖರ್ಜಿಯವರು ಎಂತಹ ಮಹಾನ್ ದೇಶ ಭಕ್ತ ಎಂಬುದನ್ನು ಅರಿಯಬಹುದಾಗಿದೆ ಎಂದು ಕುಯಿಲಾಡಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ , ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ನಯನಾ ಗಣೇಶ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಉಡುಪಿ ನಗರ ಪ್ರಶಿಕ್ಷಣ ಸಂಚಾಲಕ ಲೋಕಯ್ಯ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಶೆಟ್ಟಿ, ಮಾಯಾ ಕಾಮತ್, ಲೈಲಾ ಪ್ರಭಾವತಿ, ದಯಾಶಿನಿ ಪಾಂಡುರಂಗ ಮುಂತಾದವರು ಉಪಸ್ಥಿತರಿದ್ದರು.