Design a site like this with WordPress.com
Get started

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ : ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ ನಾಗರಿಕರು ಕೋವಿಡ್‍ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಪ್ ಕ್ವಾರೆಂಟೈನ್ ಆಗಿರುವ ಸನ್ನಿವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‍ನಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ಸಹಾಯದೊಂದಿಗೆ ಲಸಿಕೆ ವಿತರಣಾ ಅಭಿಯಾನದಲ್ಲೂ ಸರಕಾರ ಮತ್ತು ಅಧಿಕಾರಿಗಳ ಜೊತೆ ಕೈಜೋಡಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಅಂತಹ ಎಲ್ಲ ಕಾರ್ಯಕರ್ತರ ಸೇವಾ ಮನೋಭಾವ ಪ್ರಶಂಸನೀಯ ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಜೂ.28ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ ನೀಡಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ಡಾ| ಶ್ಯಾಮಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯ ರವರಂತಹ ಹಿರಿಯರು ತ್ಯಾಗ ಬಲಿದಾನದಿಂದ, ಸಿದ್ಧಾಂತಗಳಡಿಯಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಅವರ ದೂರದರ್ಶಿತ್ವದ ಚಿಂತನೆಗಳು ಮತ್ತು ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷವನ್ನು ಬೆಳೆಸುವ ಗುರುತರವಾದ ಜವಾಬ್ದಾರಿ ಎಲ್ಲ ಕಾರ್ಯಕರ್ತರ ಮೇಲಿದೆ. ದಕ್ಷಿಣ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಜನಸಂಘದ ನೇತೃತ್ವದಲ್ಲಿ ಉಡುಪಿ ನಗರಸಭೆ ಅಧಿಕಾರಕ್ಕೇರಿದೆ. ಬಿಜೆಪಿ ಕಾರ್ಯಕರ್ತರು ಸೇವಾ ಪ್ರವೃತ್ತಿಯಿಂದ ತೊಡಗಿಸಿಕೊಂಡಿರುವವರು. ಜನತೆ ಬಿಜೆಪಿಯೊಂದಿಗೆ ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿರುವ ಈ ಕಾಲಘಟ್ಟದಲ್ಲಿ ದಣಿವರಿಯದೆ ಸೇವೆಯಲ್ಲಿ ತೊಡಗಿಸಿಕೊಂಡು ಜನತೆಯ ಆಶೋತ್ತರಗಳನ್ನು ಈಡೇರಿಸಿದಾಗ ನಿಗದಿತ ಗುರಿಯನ್ನು ತಲುಪಲು ಸಾಧ್ಯ ಎಂದರು.

ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಭಾಗವಹಿಸಲಾಗುವುದು. ಉಡುಪಿ ಜಿಲ್ಲೆಯಾದ್ಯಂತ ಕಿಂಡಿ ಅಣೆಕಟ್ಟುಗಳ ನಿರ್ಮಾಣ ಪ್ರಗತಿಯಲ್ಲಿದ್ದು, ರಸ್ತೆಗಳ ಅಭಿವೃದ್ಧಿ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಿ ಕಡಲ ತೀರ ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವುದರ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು
ಎಂದು ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ವಿಧಾನಸಭಾ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: