Design a site like this with WordPress.com
Get started

11 ಜಿಲ್ಲೆಗಳಲ್ಲಿ ‘ಲಾಕ್ ಡೌನ್’ ಮುಂದುವರಿಸಲು ಸಿಎಂ ಯಡಿಯೂರಪ್ಪ ಘೋಷಣೆ

ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಜೂನ್​ 14 ರಿಂದ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್​ ಆದೇಶ ಮುಂದುವರಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಉಸ್ತುವಾರಿ ಸಚಿವರ ಜೊತೆಗಿನ ಸಭೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಲಾಕ್ಡೌನ್ ಆದೇಶದಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂದು ಹೇಳಿದ್ದಾರೆ.Continue reading “11 ಜಿಲ್ಲೆಗಳಲ್ಲಿ ‘ಲಾಕ್ ಡೌನ್’ ಮುಂದುವರಿಸಲು ಸಿಎಂ ಯಡಿಯೂರಪ್ಪ ಘೋಷಣೆ”

ಕೊರೋನಾ ವಾರಿಯರ್ಸ್ ಗೆ ಸನ್ಮಾನ

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನತೆಯ ಆರೋಗ್ಯ ಸಂರಕ್ಷಣೆಯ ಸತ್ಕಾರ್ಯದಲ್ಲಿ ಸೇವಾ ನಿರತರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರಾದ ಉಡುಪಿಯ ಪ್ರವೀಣ, ಮಲ್ಪೆಯ ವಿಶಾಲ ನಾಯ್ಕ್ ಹಾಗೂ ಆಶಾ ಕಾರ್ಯಕರ್ತೆಯರಾದ ಅಂಬಲಪಾಡಿ ನಗರದ ಸರಸ್ವತಿ ಕೆ. ಶ್ರೀಯಾನ್, ಅಂಬಲಪಾಡಿ ಗ್ರಾಮಾಂತರದ ಗಾಯತ್ರಿ, ಕಪ್ಪೆಟ್ಟು ವಾರ್ಡಿನ ನಿಶಾ ಕಿದಿಯೂರು ಮತ್ತು ಉಚಿತ ಆಟೋ ಸೇವೆ ನೀಡುತ್ತಿರುವ ಆಟೋ ಚಾಲಕ ಶ್ರೀನಿವಾಸ್ ಕಪ್ಪೆಟ್ಟು ಇವರನ್ನು ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅಂಬಲಪಾಡಿContinue reading “ಕೊರೋನಾ ವಾರಿಯರ್ಸ್ ಗೆ ಸನ್ಮಾನ”

ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ

ಬೆಂಗಳೂರು, ಜೂ.10: ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸುವ ಕುರಿತಂತೆ ಇಂದು(ಜೂ.10) ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  ಅವರು ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. ಈ ವೇಳೆContinue reading “ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ”

ಎಲ್ಲರಿಗೂ ಉಚಿತ ಲಸಿಕೆ, ದೀಪಾವಳಿ ವರೆಗೆ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮಲ್ಲಿ ಅನೇಕರು ಪರಿವಾರದವರನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾದಂತಹ ಮಹಾಮಾರಿಯನ್ನು ಎಂದೂ ನೋಡಿರಲಿಲ್ಲ. ಎರಡನೆಯ ಅಲೆ ವಿರುದ್ಧ ಹೋರಾಡುತ್ತಿದ್ದೇವೆ. ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ಸಮರೋಪಾದಿಯಲ್ಲಿ ಆರೋಗ್ಯ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ದೇಶದ ಜನ ಸಂಕಷ್ಟ ಎದುರಿಸಿದ್ದಾರೆ. ಜೊತೆಗೆ ಸೋಂಕು ಹೊಡೆದೋಡಿಸಲು ಹೋರಾಟ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಇಡೀ ಜಗತ್ತನ್ನೇ ಕೊರೋನಾ ಸೋಂಕು ಕಂಗೆಡಿಸಿದೆ. ಭಾರತ ತನ್ನContinue reading ಎಲ್ಲರಿಗೂ ಉಚಿತ ಲಸಿಕೆ, ದೀಪಾವಳಿ ವರೆಗೆ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ

ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್

ಭಾರತದ ಅತ್ಯಂತ ಕುರೂಪಿ ಭಾಷೆ’ ಎಂದು ಗೂಗಲ್‌ನಲ್ಲಿ ಟೈಪಿಸಿ ಸರ್ಚ್ ಮಾಡಿದರೆ ಮೊದಲು ಎದುರಾಗುವುದು ‘ಕನ್ನಡ’. ಕನ್ನಡಿಗರ ಸ್ವಾಭಿಮಾನ, ಭಾಷೆ, ನೆಲ, ಜಲದ ಕುರಿತಂತೆ ಪದೇ ಪದೇ ಕೆಣಕುವ ಪ್ರಯತ್ನಗಳು ನಡೆಯುತ್ತಲೇ ಇದೆ. ಅದಕ್ಕೆ ಇನ್ನೊಂದು ಸೇರ್ಪಡೆ ಇದು. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಕನ್ನಡ ಪ್ರೇಮಿಗಳು ಚರ್ಚೆ ನಡೆಸುತ್ತಿದ್ದರು. Ugliest Language In India (ಭಾರತದ ಅತ್ಯಂತ ಕುರೂಪಿ ಭಾಷೆ) ಎಂದು ಟೈಪ್ ಮಾಡಿದರೆ ಗೂಗಲ್ ಮೊದಲು ಪ್ರದರ್ಶಿಸುವುದು debtconsolidationsquad.com ಎಂಬ ಜಾಲತಾಣವೊಂದರಲ್ಲಿ ಪ್ರಕಟವಾದ ಅಂಶವನ್ನು. ದಕ್ಷಿಣ ಭಾರತದಲ್ಲಿ ಸುಮಾರುContinue reading “ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್”

ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ

ಪ್ರಾರಂಭದ ದಿನಗಳಿಂದಲೂ ಕೋವಿಡ್ ಲಸಿಕೆಯ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸಿಗರು ತಾವು ಮಾತ್ರ ಗುಟ್ಟಾಗಿ ಲಸಿಕೆ ಪಡೆದುಕೊಂಡು ಜನಸಾಮಾನ್ಯರ ದಾರಿತಪ್ಪಿಸಿ ವಂಚಿಸುವ ಕಾಯಕದಲ್ಲಿ ನಿರತರಾಗಿರುವ ಜೊತೆಗೆ ಇದೀಗ ಲಸಿಕೆ ಕೊಡಿಸಲು ಒತ್ತಾಯಿಸುವ ನಾಟಕವಾಡುತ್ತಿರುವುದು ಹಾಸ್ಯಾಸ್ಪದ. ಕೇವಲ ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಹೇಳಿದ್ದಾರೆ. ಅವರು ಲಸಿಕೆ ಹೆಸರಲ್ಲಿ ಬಿಜೆಪಿ ಸ್ವಜನ ಹಿತಾಸಕ್ತಿ ಎಂಬ ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆಯವರ ಆರೋಪವನ್ನು ಖಂಡಿಸಿ, ಕಾಂಗ್ರೆಸಿಗರಿಗೆContinue reading “ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ”

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಸರ್ವತೋಮುಖ ಅಭಿವೃದ್ಧಿಗೆ, 2021-22 ನೇ ಆರ್ಥಿಕ ವರ್ಷದಲ್ಲಿ ಒಟ್ಟು 369.00 ಕೋಟಿ ರೂಪಾಯಿ ಕೇಂದ್ರ ಸರಕಾರದಿಂದ ಮಂಜೂರು- ಶೋಭಾ ಕರಂದ್ಲಾಜೆ.

2021-22ನೇ ಆರ್ಥಿಕ ವರ್ಷದಲ್ಲಿಉಡುಪಿ-ಚಿಕ್ಕಮಗಳೂರು ಕ್ಷೇತ್ರದ;ರಾಷ್ಟ್ರೀಯ ಹೆದ್ದಾರಿ 169A ಯ ಹೆಬ್ರಿ-ಪರ್ಕಳ ರಸ್ತೆ, ಕರಾವಳಿ ಜಂಕ್ಷನ್-ಮಲ್ಪೆ ಸಂಪರ್ಕಿಸುವ ರಸ್ತೆಗಳನ್ನು ಚತುಷ್ಪಥೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಒಟ್ಟು 29.1 ಕಿ ಮೀ ಉದ್ದದ ಕಾಮಗರಿಗಳಿಗೆ ಭೂ ಸಾರಿಗೆ ಸಚಿವಾಲಯ ಅಂದಾಜು ಮೊತ್ತ 350.00 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ.ರಾಷ್ಟ್ರೀಯ ಹೆದ್ದಾರಿ 169A ಸೀತಾನದಿ ಬಳಿಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ತೊಂದರೆಗಳನ್ನು ಸರಿಪಡಿಸಲು, ತಡೆಗೋಡೆ ನಿರ್ಮಾಣ, ರಸ್ತೆ ಎತ್ತರಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿ 169ರContinue reading “ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಸರ್ವತೋಮುಖ ಅಭಿವೃದ್ಧಿಗೆ, 2021-22 ನೇ ಆರ್ಥಿಕ ವರ್ಷದಲ್ಲಿ ಒಟ್ಟು 369.00 ಕೋಟಿ ರೂಪಾಯಿ ಕೇಂದ್ರ ಸರಕಾರದಿಂದ ಮಂಜೂರು- ಶೋಭಾ ಕರಂದ್ಲಾಜೆ.”

ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್ ಅಭಿನಂದನೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಹಸಿರು ನಿಶಾನೆ ತೋರಿಸಿದ್ದು, ಈ ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕ ವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿ ವರೆಗೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲು ಒಟ್ಟು ರೂ. 350.00 ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಲಾಗಿದೆ ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಮಲ್ಪೆಯಿಂದ ಹೆಬ್ರಿವರೆಗೆContinue reading “ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್ ಅಭಿನಂದನೆ”