ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಾರ್ದಿಕ ಅಭಿನಂದನೆಗಳು. ನೂತನ ಮುಖ್ಯಮಂತ್ರಿಗಳು ಕೈಗೊಂಡಿರುವ ಚೊಚ್ಚಲ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾContinue reading “ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್“
Monthly Archives: July 2021
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆContinue reading “ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ”
ಅಲೆವೂರು ಪ್ರಗತಿನಗರದಲ್ಲಿ ದಾಸ ಸಿಂಚನ
ಅಲೆವೂರು ಪ್ರಗತಿನಗರದ ಶ್ರೀ ನಾಗರಾಜ ರಕ್ತೇಶ್ವರಿ ಸನ್ನಿಧಾನದಲ್ಲಿಖ್ಯಾತ ಗಾಯಕರೂ ದಾಸ ಸಿಂಚನ ಕಾರ್ಯಕ್ರಮದ ಮೂಲಕ ಮನೆ ಮಾತಾಗಿರುವ ಬೆಂಗಳೂರಿನ ಎಮ್ ಎಸ್ ಗಿರಿಧರ್ ಹಾಗೂ ವಸುಧಾ ಜಿ ಇವರಿಗೆ ಪಂಚಗಾನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಾಯಾ ಕಾಮತ್, ಸಂಸ್ಥೆಯ ಅಧ್ಯಕ್ಷರಾದ ರಾಮ ನಾಯ್ಕ್, ಪ್ರಮುಖರಾದ ಶ್ರೀಕಾಂತ ನಾಯಕ್, ಸತೀಶ್, ನಾಗರಾಜ್ ಆಚಾರ್ಯ, ರಾಘವೇಂದ್ರ ಆಚಾರ್ಯ, ಸುಜಾತ, ಗೀತಾ, ಆಶಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗದಿಂದ ಶಾಲಾ ಪರಿಕರ ವಿತರಣೆ
ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗ ಎನ್ನು ಸಂಸ್ಥೆಯ ದತ್ತು ಸ್ವೀಕಾರ ಕಾರ್ಯಕ್ರಮದಡಿ, ಇವರ ಕೋರಿಕೆಯ ಮೇರೆಗೆ ಸಂಸ್ಥೆಯ ಹಿತೈಷಿಯಾದ ಶ್ರೀ ಹರಿಕ್ರಷ್ಣ ಭಟ್ ಮೂಡು ಅಲೆವೂರು ಕರ್ವಾಲು ಇವರು ಸುಮಾರು ರೂ.11500/- ಮೊತ್ತದ ನೋಟ್ ಪುಸ್ತಕ, ಪೆನ್ ಪೆನ್ಸಿಲ್ ಇತ್ಯಾದಿ ಮಕ್ಕಳಿಗೆ ಬೇಕಾಗುವ ಪರಿಕರಗಳನ್ನು ನೀಡಿರುವರು. ಅವರಿಗೆ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕರ್ವಾಲು ಇವರು ಧನ್ಯವಾದಗಳನ್ನು ಅರ್ಪಿಸಿರುವರು. ಈ ಸಂದರ್ಭದಲ್ಲಿContinue reading “ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗದಿಂದ ಶಾಲಾ ಪರಿಕರ ವಿತರಣೆ”
ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ
ಪ್ರಬುದ್ಧ ರಾಜಕಾರಿಣಿ, ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿಯವರು ಇದೀಗ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತ ಪಡಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿಯವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೊಮ್ಮಾಯಿಯವರು ಸಾರ್ಥಕContinue reading “ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಅಂತಾ ಎರಡು ದಿನಗಳಿಂದ ಸಿಕ್ಕಾಪಟ್ಟೆ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಎರಡು ದಿನದಿಂದ ಸಿಎಂ ರೇಸ್ ನಲ್ಲಿ ಬೇರೆ ಬೇರೆ ಹೆಸರುಗಳು ಕೇಳಿ ಬಂದಿದ್ದವು. ಬಹುತೇಕ ಎಲ್ಲಾ ಬಿಜೆಪಿ ಶಾಸಕರ ಹೆಸರುಗಳು ಕೇಳಿ ಬಂದಿದ್ದವು ಅಂದರೆ ತಪ್ಪಲ್ಲ. ಆದರೆ ಈಗ ಆ ಎಲ್ಲಾ ಕುತೂಹಲಕ್ಕೆ ಅಂತಿಮ ತೆರೆ ಬಿದ್ದಿದೆ. ಬಸವ್ ರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ.Continue reading “ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ”
ಪಕ್ಷದ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಕುಯಿಲಾಡಿ ಸುರೇಶ್ ನಾಯಕ್ ಕರೆ
ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬಿಜೆಪಿ ಕಾರ್ಯಕರ್ತ ಆಧಾರಿತ ಅತೀ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿತ್ಯ ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.26ರಂದು ಹಿರಿಯಡ್ಕದ ಓಂತಿಬೆಟ್ಟು ಆರ್.ಎಸ್.ಬಿ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾಪುContinue reading “ಪಕ್ಷದ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಕುಯಿಲಾಡಿ ಸುರೇಶ್ ನಾಯಕ್ ಕರೆ”
ಭಾರತಕ್ಕೆ ಬೆಳ್ಳಿ ಪದಕ ತಂದ ಮೀರಾಬಾಯಿ
ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತ ಪದಕದ ಖಾತೆ ತೆರೆದಿದೆ. ಮೀರಾಬಾಯಿ ಚಾನು ದಾಖಲೆ ಬರೆದಿದ್ದಾರೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು, ದೇಶದ ಕೀರ್ತಿ ಹೆಚ್ಚಿಸಿದ್ದಾರೆ. ಮೀರಾಬಾಯಿ 49 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಮೀರಾಬಾಯಿ ಚಾನು ಸ್ನ್ಯಾಚ್‌ನಲ್ಲಿ 87 ಕೆಜಿ ಎತ್ತಿದರೆ, ಕ್ಲೀನ್ ಮತ್ತು ಜರ್ಕ್ನಲ್ಲಿ 115 ಕೆಜಿ ಎತ್ತಿದ್ದಾರೆ. ಇದರೊಂದಿಗೆ ಅವರು ಒಟ್ಟು 202 ಕೆ.ಜಿ.ಗಳನ್ನು ಎತ್ತಿದರು. ಚಾನುಗೆ ಮೊದಲು, ಸಿಡ್ನಿ ಒಲಿಂಪಿಕ್ಸ್ 2000ರಲ್ಲಿ ಕರ್ಣಂ ಮಲ್ಲೇಶ್ವರಿ, ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿContinue reading “ಭಾರತಕ್ಕೆ ಬೆಳ್ಳಿ ಪದಕ ತಂದ ಮೀರಾಬಾಯಿ”
ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾರೈಕೆ
ರಾಷ್ಟ್ರೀಯ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾರೈಸಿದ್ದಾರೆ.
ಯಕ್ಷಗಾನ ಕಲಾರಂಗ ಕುಂದಾಪುರದ ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನಿರ್ಮಿಸಿಕೊಟ್ಟ ನೂತನ ಮನೆಯ ಉದ್ಘಾಟನೆ
ಉಡುಪಿ : ಯಕ್ಷಗಾನ ಕಲಾರಂಗ ಕುಂದಾಪುರದ ವಿದ್ಯಾಪೋಷಕ್ ವಿದ್ಯಾರ್ಥಿನಿ ಶ್ರೀನಿಧಿ (I B.Sc) ಇವಳಿಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸುಮಾ ‘ಪಾವನಿ’ ಮನೆಯ ಉದ್ಘಾಟನೆ ಜುಲೈ 17ರಂದು ನೆರವೇರಿತು. ಅಭ್ಯಾಗತರಾಗಿ ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ, ಮಂಗಳೂರಿನ ಉದ್ಯಮಿ ಶ್ರೀ ಗೋಕುಲನಾಥ ಪ್ರಭು, ಬೆಂಗಳೂರಿನ ವೈದ್ಯ ವಿಜ್ಞಾನಿ ಡಾ. ರಾಜಾ ವಿಜಯ್ ಕುಮಾರ್, ಮಂಗಳೂರಿನ ವೈದ್ಯರಾದ ಡಾ. ಜೆ.ಎನ್ ಭಟ್, ಗೋವಾದ ಆನಂದContinue reading “ಯಕ್ಷಗಾನ ಕಲಾರಂಗ ಕುಂದಾಪುರದ ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನಿರ್ಮಿಸಿಕೊಟ್ಟ ನೂತನ ಮನೆಯ ಉದ್ಘಾಟನೆ”