Design a site like this with WordPress.com
Get started

ಚಾರ್ಮಾಡಿಯಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆಗೆ ಡಾ. ಹೆಗ್ಗಡೆಯವರಿಂದ ಚಾಲನೆ. 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಬೀಜ ಬಿತ್ತನೆ ಕಾರ್ಯ

ಚಾರ್ಮಾಡಿ : ಚಾರ್ಮಾಡಿಯ ಕಣ್ಣಪ್ಪಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮತ್ತು ತರಕಾರಿ ಗಿಡಗಳ ಬೀಜದುಂಡೆಗಳನ್ನು ಹಾಕುವ ಮೂಲಕ ‘ಸಾಮಾಜಿಕ ಅರಣ್ಯೀಕರಣ’ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಚಾಲನೆ ನೀಡಿದರು. ಚಾರ್ಮಾಡಿಯ ಕನಪ್ಪಾಡಿ ಮೀಸಲು ಅರಣ್ಯ ಪ್ರದೇಶದ ಸುಮಾರು 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಗಿಡಗಳ ಬಿತ್ತನೆ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿತು. ಮಾವು, ಹಲಸು,Continue reading “ಚಾರ್ಮಾಡಿಯಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆಗೆ ಡಾ. ಹೆಗ್ಗಡೆಯವರಿಂದ ಚಾಲನೆ. 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಬೀಜ ಬಿತ್ತನೆ ಕಾರ್ಯ”

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಅನಾವರಣ

 ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಅನಾವರಣಗೊಂಡಿತು. ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ‌. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯContinue reading “ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಅನಾವರಣ”

ಸರಕಾರ ಕರಾಟೆ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಿ ಪ್ರೋತ್ಸಾಹಧನ ಒದಗಿಸುವಂತೆ ಮನವಿ: ವಾಮನ್ ಪಾಲನ್ ಅಂಬಲಪಾಡಿ

ಕರಾಟೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಒಂದು ಅತ್ಯುತ್ತಮ ಕ್ರೀಡೆಯಾಗಿದೆ. ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು ಎಲ್ಲ ವಯೋಮಾನದ ಜನತೆ ಆರೋಗ್ಯದ ಕಾಳಜಿಯಿಂದ ಕರಾಟೆ ಅಭ್ಯಾಸದಲ್ಲಿ ನಿರತರಾಗಿರುವುದು ವಾಸ್ತವ. ಆದರೆ ಕಠಿಣ ಪರಿಶ್ರಮದಿಂದ ಹಾಗೂ ಬದ್ಧತೆಯಿಂದ ಕರಾಟೆ ತರಗತಿಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಕರಾಟೆ ಶಿಕ್ಷಕರು ಕೋವಿಡ್ ನಿಯಂತ್ರಣಕ್ಕಾಗಿ ಸರಕಾರ ಕೈಗೊಂಡಿರುವ ಸಮಯೋಚಿತ ಲಾಕ್ ಡೌನ್ ನಿರ್ಧಾರದಿಂದ ಸಂಕಷ್ಟಕ್ಕೆ ಒಳಗಾಗಿದ್ದು ಜೀವನೋಪಾಯಕ್ಕಾಗಿ ಹರಸಾಹಸ ಪಡುತ್ತಿರುವುದು ಎಲ್ಲರಿಗೂ ತಿಳಿದ ವಿಚಾರವಾಗಿದೆ. ಕರಾಟೆ ಶಿಕ್ಷಕರು ಕೇವಲ ಕರಾಟೆ ತರಗತಿಗಳಿಗೆContinue reading “ಸರಕಾರ ಕರಾಟೆ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಿ ಪ್ರೋತ್ಸಾಹಧನ ಒದಗಿಸುವಂತೆ ಮನವಿ: ವಾಮನ್ ಪಾಲನ್ ಅಂಬಲಪಾಡಿ”