Design a site like this with WordPress.com
Get started

ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿಗಳಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಜನಸಂಖ್ಯೆ ದಿನದ ಅಂಗವಾಗಿ ಹೊಸ ಜನಸಂಖ್ಯೆ ನೀತಿಯನ್ನು ಘೋಷಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿಗಳಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಬಡತನ ನಿವಾರಣೆ, ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯ ಜೊತೆಗೆ ಹೊಸ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಈ ಕ್ರಮ ಅನಿವಾರ್ಯವೆನಿಸಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.