ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಭಕ್ತಿ-ಶ್ರದ್ಧಾ ಪೀಠವಾಗಿರುವ ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಪರ್ತಗಾಳಿ ಮಠದ 23ನೇ ಯತಿವರ್ಯರಾದ ಶ್ರೀ ವಿದ್ಯಾಧಿರಾಜತೀರ್ಥ ವಡೇರ ಸ್ವಾಮೀಜಿಯವರು ಹರಿಪಾದ ಸೇರಿದ ಬಗ್ಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸಮಾಜವು ಓರ್ವ ಶ್ರೇಷ್ಠ ದಾರ್ಶನಿಕರನ್ನು ಕಳೆದುಕೊಂಡಂತಾಗಿದೆ. ಭಗವಂತನು ಸ್ವಾಮೀಜಿಯವರ ಶಿಷ್ಯ ವರ್ಗ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.