ಭಾರತಕ್ಕೆ ಬೆಳ್ಳಿ ಪದಕ ತಂದ ಮೀರಾಬಾಯಿ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತ ಪದಕದ ಖಾತೆ ತೆರೆದಿದೆ. ಮೀರಾಬಾಯಿ ಚಾನು ದಾಖಲೆ ಬರೆದಿದ್ದಾರೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು, ದೇಶದ ಕೀರ್ತಿ ಹೆಚ್ಚಿಸಿದ್ದಾರೆ. ಮೀರಾಬಾಯಿ 49 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಮೀರಾಬಾಯಿ ಚಾನು ಸ್ನ್ಯಾಚ್‌ನಲ್ಲಿ 87 ಕೆಜಿ ಎತ್ತಿದರೆ, ಕ್ಲೀನ್ ಮತ್ತು ಜರ್ಕ್ನಲ್ಲಿ 115 ಕೆಜಿ ಎತ್ತಿದ್ದಾರೆ. ಇದರೊಂದಿಗೆ ಅವರು ಒಟ್ಟು 202 ಕೆ.ಜಿ.ಗಳನ್ನು ಎತ್ತಿದರು. ಚಾನುಗೆ ಮೊದಲು, ಸಿಡ್ನಿ ಒಲಿಂಪಿಕ್ಸ್ 2000ರಲ್ಲಿ ಕರ್ಣಂ ಮಲ್ಲೇಶ್ವರಿ, ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದರು. ಆ ಸಮಯದಲ್ಲಿ ಕರ್ಣಂ ಮಲ್ಲೇಶ್ವರಿ ಒಟ್ಟು 240 ಕೆ.ಜಿ. ಎತ್ತಿದ್ದರು.

ಇನ್ನೊಂದೆಡೆ ಟೋಕಿಯೊ ಒಲಿಂಪಿಕ್ಸ್ ನ ಎರಡನೇ ದಿನ ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬಿಲ್ಲುಗಾರಿಕೆಯ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ, ದೀಪಿಕಾ ಕುಮಾರಿ ಮತ್ತು ಪ್ರವೀಣ್ ಜಾಧವ್ ಜೋಡಿ ಕ್ವಾರ್ಟರ್ ಫೈನಲ್‌ನಲ್ಲಿ ಸೋತು ಹೊರಬಿದ್ದಿದ್ದಾರೆ. ದಕ್ಷಿಣ ಕೊರಿಯಾದ ಆನ್ ಸ್ಯಾನ್ ಮತ್ತು ಕಿಮ್ ಜೆ ಡಿಯೋಕ್ 6-2ರಿಂದ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರು.

Leave a comment

Design a site like this with WordPress.com
Get started