ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಪ್ರಬುದ್ಧ ರಾಜಕಾರಿಣಿ, ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿಯವರು ಇದೀಗ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತ ಪಡಿಸಿದೆ.

ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿಯವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೊಮ್ಮಾಯಿಯವರು ಸಾರ್ಥಕ ಜನಪರ ಆಡಳಿತ ನೀಡುವ ಮೂಲಕ ರಾಜ್ಯದ ಮಾದರಿ ಮುಖ್ಯಮಂತ್ರಿಗಳಾಗಿ ಯಶಸ್ಸು ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

Leave a comment

Design a site like this with WordPress.com
Get started