ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ 2019 ರ ಅಗಸ್ಟ್ 20 ರಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನಿರ್ಗಮನ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಅವರಿಂದ ಅಧಿಕಾರ ವಹಿಸಿ ಕೊಂಡ ಜಿ ಜಗದೀಶ್ ಆರಂಭದಿಂದಲ್ಲೆContinue reading “ಉಡುಪಿ ಡಿಸಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ನೇಮಕ”
Monthly Archives: August 2021
ಮಣಿಪುರ ಗ್ರಾಮ ಕುಂತಳ ನಗರದ ಧಾರ್ಮಿಕ ಕ್ಷೇತ್ರ ಮೋಕ್ಷಗಿರಿಯಲ್ಲಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣ: ಗ್ರಾಮಸ್ಥರ ಆಕ್ರೋಶ
ಮಣಿಪುರ ಗ್ರಾಮದ ಕುಂತಳ ನಗರ ಮೋಕ್ಷಗಿರಿ ಪುಣ್ಯ ಕೇತ್ರ ಮತ್ತು ವಿಷ್ಣುಮೂರ್ತಿ ದೇವಸ್ಥಾನದ ಬಳಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣಕ್ಕೆ ಹುನ್ನಾರ – ಸ್ಥಳೀಯ ಜನರಿಂದ ಬಾರಿ ವಿರೋಧ ಮಣಿಪುರ ಗ್ರಾಮದ ಕುಂತಳ ನಗರದ ಮೋಕ್ಷ ಗಿರಿ ಪುಣ್ಯ ಕೇತ್ರದಲ್ಲಿ ದೇವಸ್ಥಾನ ನಿರ್ಮಾಣ, ಪಿಲಿ ಪಂಜರವನ್ನು ದೇಶದ ಒಂದು ಟೂರಿಸಮ್ಮ್ ಕೇತ್ರ ಮಾಡುವ ಉದ್ದೇಶದಿಂದ ಹಲವಾರು ವರ್ಷಗಳ ಹಿಂದೆ 30ಎಕ್ರೆ ಜಾಗದಲ್ಲಿ ಕಾರ್ಯಕ್ರಮ ರೂಪಿಸಿ ಕಾಮಗಾರಿ ನಡೆದಿತ್ತು. ಆದರೆ ಜಗನ್ನಾಥ ಶೆಟ್ಟಿ ಯವರ ನಿಧನದಿಂದ ಈContinue reading “ಮಣಿಪುರ ಗ್ರಾಮ ಕುಂತಳ ನಗರದ ಧಾರ್ಮಿಕ ಕ್ಷೇತ್ರ ಮೋಕ್ಷಗಿರಿಯಲ್ಲಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣ: ಗ್ರಾಮಸ್ಥರ ಆಕ್ರೋಶ”
ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಗೆ ರಾಜ್ಯ ಸರಕಾರದ ದಿಟ್ಟ ಕ್ರಮ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಗೋಹತ್ಯೆ ನಿಷೇಧ ಕಾನೂನಿಗೆ ಪೂರಕವಾಗಿ ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಗೆ ಒತ್ತು ನೀಡಿ ಅನುದಾನವನ್ನು ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ದಿಟ್ಟ ಕ್ರಮ ಅಭಿನಂದನೀಯ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪಿಸಲು ಅಕ್ಟೋಬರ್ 2, 2021ರ ಗಡುವನ್ನು ವಿಧಿಸಿರುವ ರಾಜ್ಯ ಸರಕಾರ ಪ್ರತೀ ಜಿಲ್ಲೆಗೆ ರೂ.24 ಲಕ್ಷಗಳ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹContinue reading “ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಗೆ ರಾಜ್ಯ ಸರಕಾರದ ದಿಟ್ಟ ಕ್ರಮ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್”
ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್‍ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ – ಉಡುಪಿ ಜಿಲ್ಲಾ ಬಿಜೆಪಿ
ದೇಶ ವಿಭಜನೆಗೆ ಕುಮ್ಮಕ್ಕು ನೀಡಿದ ಕಾಂಗ್ರೆಸ್ ನಾಯಕರ ಸಹಿತ ಒಂದೇ ಕುಟುಂಬದ ವೈಭವೀಕರಣ ಮತ್ತು ನಿರಂತರ ಭ್ರಷ್ಟಾಚಾರದ ಮೂಲಕ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶದ ಅಸ್ಮಿತೆಯನ್ನು ಪ್ರಪಾತಕ್ಕೆ ತಳ್ಳಿರುವ ಕುಖ್ಯಾತಿಗೆ ಪಾತ್ರವಾಗಿರುವ, ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್‍ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಹೇಳಿದೆ. ಭ್ರಷ್ಟಾಚಾರದ ಮೂಲಕ ಬಿಜೆಪಿಗೆ ಅಧಿಕಾರ ಎಂಬ ಶೀರ್ಷಿಕೆಯಡಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿರುವ ಪತ್ರಿಕಾContinue reading “ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್‍ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ – ಉಡುಪಿ ಜಿಲ್ಲಾ ಬಿಜೆಪಿ”
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರ ಮಾತೃಶ್ರೀಯವರಾದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜನಾನುರಾಗಿಯಾಗಿದ್ದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಯಶ್ಪಾಲ್ ಸುವರ್ಣ ಹಾಗೂ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಪ್ರಕಟಣೆಯಲ್ಲಿContinue reading “ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.”
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 167ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ.,Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ”
ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ
75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿದ್ಯಾರ್ಥಿಗಳು ಭಾಗವಹಿಸಿ 46 ಪದಕಗಳನ್ನು ಪಡೆದಿರುತ್ತಾರೆ. ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಧರ್ಮದರ್ಶಿಗಳು ಹಾಗೂ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಗೌರವಾಧ್ಯಕ್ಷರಾದ ಡಾ! ನಿ.ಬೀ. ವಿಜಯ ಬಲ್ಲಾಳ್Continue reading “ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ”
ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ
ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ ನೀಡಲು ಆಗಮಿಸಿದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವರ ನೇತೃತ್ವದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ, ಚಂಡೆ-ಕೊಂಬು-ಕಹಳೆ, ಯಕ್ಷಗಾನ ವೇಷದಾರಿಗಳ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಾಗಮದೊಂದಿಗೆ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕೇಂದ್ರ ಸಚಿವೆ ಶೋಭಾContinue reading “ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ”
ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ: ಹಿಂ.ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಜನ್ಮದಿನಾಚರಣೆ
ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರಾಜ್ಯ ಕಂಡ ಹಿಂದುಳಿದ ವರ್ಗದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ನಾಯಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ರವರ ನಿವಾಸದಲ್ಲಿ ಪುಷ್ಪಾಂಜಲಿ ಕಾರ್ಯಕ್ರಮದೊಂದಿಗೆ ಗೌರವ ನಮನ ಸಲ್ಲಿಸಲಾಯಿತು. ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿContinue reading “ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ: ಹಿಂ.ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಜನ್ಮದಿನಾಚರಣೆ”
ಬಿಜೆಪಿ ಜಿಲ್ಲಾ ರೈತ ಮೋರ್ಚಾ: ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಯವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ರೈತ ಮೋರ್ಚಾ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಯವರು ಜ್ಯೋತಿ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ರೈತ ಮೋರ್ಚಾ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಕಾರ್ಯಸೂಚಿಯಂತೆ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಜಿಲ್ಲೆಯ 75 ಹಿರಿಯ ಕೃಷಿಕರನ್ನುContinue reading “ಬಿಜೆಪಿ ಜಿಲ್ಲಾ ರೈತ ಮೋರ್ಚಾ: ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”