Design a site like this with WordPress.com
Get started

ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control )Continue reading “ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ”

ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ

ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆಗಳು. ಇವರಿಬ್ಬರ ಸಚಿವ ಸಚಿವ ಸ್ಥಾನದ ಅವಧಿಯಲ್ಲಿ ಉಡುಪಿ ಜಿಲ್ಲೆ ಅಭಿವ್ರಧ್ಧಿಯ ಉತ್ತುಂಗಕ್ಕೇರಲಿ. ಅದರೊಂದಿಗೆ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಔನ್ನತ್ಯಕ್ಕೇರಲಿ. ಮಾದರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸುವೆವು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್Continue reading “ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ”

ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ ಮತ್ತು ವಿ.ಸುನೀಲ್ ಕುಮಾರ್ ರವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 6 ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರಗಲಿದೆ. ಈ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ,Continue reading “ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ”

ಏನಿದು ಇ-ರುಪಿ…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ಡಿಜಿಟಲ್ ಪಾವತಿಗೆ ಇನ್ನಷ್ಟು ಉತ್ತೇಜನ ಕೊಡುವ ಉದ್ದೇಶದಿಂದ ಇ-ರುಪಿ ಸೌಲಭ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಸಂಜೆ 4:30ಕ್ಕೆ ಚಾಲನೆ ಕೊಟ್ಟಿದ್ದಾರೆ. ಏನಿದು ಇ-ರುಪಿ ? ನಗದುರಹಿತ ಹಾಗೂ ಸಂಪರ್ಕರಹಿತವಾಗಿ ಡಿಜಿಟಲ್ ಪಾವತಿ ಮಾಡಲು ಇರುವ ವ್ಯವಸ್ಥೆ ಆಗಿರುವ ಇ-ರುಪಿ ಕ್ಯೂಆರ್‌ ಕೋಡ್ ಹಾಗೂ ಎಸ್‌ಎಂಎಸ್‌ ಆಧರಿತ ಇ-ವೌಚರ್‌‌ ಆಗಿದ್ದು, ಫಲಾನುಭವಿಗಳ ಮೊಬೈಲ್‌ಗಳಿಗೆ ಕಳುಹಿಸಲಾಗುವುದು. ಒಮ್ಮೆ-ಪಾವತಿ ಮಾಡುವ ಈ ಸೌಲಭ್ಯದ ಮುಖಾಂತರ ಕಾರ್ಡ್ ಇಲ್ಲದೆಯೂ ಈ ವೌಚರ್‌ ಅನ್ನು ಯಾವುದೇ ಕಾರ್ಡ್, ಡಿಜಿಟಲ್ ಪೇಮೆಂಟ್ ಅಪ್ಲಿಕೇಶನ್Continue reading “ಏನಿದು ಇ-ರುಪಿ…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ”

ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ; ಕೋಟ ಶ್ರೀನಿವಾಸ ಪೂಜಾರಿ ಸಹಿತ ನೂತನ 29 ಸಚಿವರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಹಲವು ಹೊಸ ಮುಖಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಿದರು. ಹಿರಿಯ ಶಾಸಕ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣವನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.