ಕೊರೋನಾವೈರಸ್ ಮೂರನೇ ಅಲೆ ಹತ್ತಿರ ಬರುತ್ತಿರುವಂತೆ ಕಾಣುತ್ತಿದ್ದು ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು ಗಡಿಭಾಗಗಳಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ. ಇನ್ನೂ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಇಂದು ರಾತ್ರಿ 9ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂವನ್ನುContinue reading “ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ”
Daily Archives: August 6, 2021
ನಾಳೆ ಆಗಸ್ಟ್ 7ರಂದು ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕಾರ
ನಾಳೆ ಆಗಸ್ಟ್ 7, 2021 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ನೂತನ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ರವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ಬಂಧುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ
ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್Continue reading “ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ”