
ಕೊರೋನಾವೈರಸ್ ಮೂರನೇ ಅಲೆ ಹತ್ತಿರ ಬರುತ್ತಿರುವಂತೆ ಕಾಣುತ್ತಿದ್ದು ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು ಗಡಿಭಾಗಗಳಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ.
ಇನ್ನೂ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಇಂದು ರಾತ್ರಿ 9ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ
ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ. ಮತ್ತು ಗಡಿ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ.