Design a site like this with WordPress.com
Get started

ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ರಾಜ್ಯ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಬಿಜೆಪಿ ವರಿಷ್ಠರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಷ್ಟು ಆದ್ಯತೆ ನೀಡಿದಂತಾಗಿದೆ. ರಾಜ್ಯದಲ್ಲಿ ಯುವಕರು ಹಾಗೂ ಹಿರಿಯರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಅಭಿವೃದ್ಧಿಗೆ ವೇಗ ದೊರೆತಂತಾಗಿದೆ. ನೂತನ ಸಚಿವ ಸಂಪುಟ ಕೋವಿಡ್ ಮತ್ತು ನೆರೆ ಹಾವಳಿಯ ಸಂಕಷ್ಟವನ್ನು ಸಮರ್ಥವಾಗಿ ಎದುರಿಸಲಿದೆ ಎಂದು ವಿಶ್ವಾಸ ವ್ಯಕಪಡಿಸಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ರಜನಿ ಹೆಬ್ಬಾರ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ತಾರಾ ಆಚಾರ್ಯ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಹಾಗೂ ಮಹಿಳಾ ಮೋರ್ಚಾದ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: