

ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ ನೀಡಲು ಆಗಮಿಸಿದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವರ ನೇತೃತ್ವದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ, ಚಂಡೆ-ಕೊಂಬು-ಕಹಳೆ, ಯಕ್ಷಗಾನ ವೇಷದಾರಿಗಳ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಾಗಮದೊಂದಿಗೆ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ಪಡಿತರ ಪಡೆಯಲು ಬಂದಿದ್ದ ಕೆಲವು ಮಹಿಳೆಯರೊಂದಿಗೆ ಕೇಂದ್ರ ಸರಕಾರ ಗರೀಬ್ ಕಲ್ಯಾಣ್ ಯೋಜನೆಯಡಿ ಪ್ರತೀ ಕುಟುಂಬಕ್ಕೆ ಹೆಚ್ಚುವರಿ ಪಡಿತರ ನೀಡುತ್ತಿರುವ ಬಗ್ಗೆ ವಿಚಾರಿಸಿ, ಗೋದಾಮು ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.
ಕೇಂದ್ರ ಸಚಿವರನ್ನು ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ತಿರಿಮುಡಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಇನ್ನಿತರ ಅಭಿಮಾನಿಗಳು ಕೇಂದ್ರ ಸಚಿವರನ್ನು ಸನ್ಮಾನಿಸಿದರು. ಚಾಂತಾರು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು.
ಬ್ರಹ್ಮಾವರ ಭಾಗದ ಅನೇಕ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ.ರಘುಪತಿ ಭಟ್, ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ವೀಣಾ ವಿ. ನಾಯ್ಕ್ , ಮಂಡಲ ಪ್ರಭಾರಿ ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ಜಿಲ್ಲಾ ಮತ್ತು ಮೋರ್ಚಾ, ಮಂಡಲಗಳ ಪದಾಧಿಕಾರಿಗಳು, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷ ಇರ್ಮಾಡಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷ ವೆಂಕಟ್ರಾಯ ನಾಯಕ್, ನಿರ್ದೇಶಕರು, ಕಾರ್ಯ ನಿರ್ವಹಣಾಧಿಕಾರಿ ಸುಭಾಷ್ ಶೆಟ್ಟಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಹಾಗೂ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.