
ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಇವರ ಮನೆಯಲ್ಲಿ ನಡೆಯಿತು.
ಪಕ್ಷದ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿಸ್ತ್ರತವಾಗಿ ಮಾಹಿತಿ ನೀಡಿದರು. ಬೂತ್ ಸಮಿತಿಯಿಂದ ರಾಷ್ಟ್ರ ಸಮಿತಿಯವರೆಗಿನ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿ ಪಕ್ಚದ ಎಲ್ಲ ಕಾರ್ಯಕ್ರಮಗಳನ್ನು ಬೂತ್ ಮಟ್ಟದಲ್ಲಿ ಚಾಚೂ ತಪ್ಪದೆ ನಡೆಸಬೇಕೆಂದು ವಿನಂತಿಸಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೆ ಅತ್ಯಂತ ಗೌರವದ ಸ್ಥಾನವಿದ್ದು ಮುಂದಿನ ದಿನಗಳಲ್ಲಿ ಬೂತ್ ಅಧ್ಯಕ್ಷರಿಗೆ ನಾಮಫಲಕ ನೀಡುವ ಕಾರ್ಯಕ್ರಮವಿದ್ದು ಅಚ್ಚುಕಟ್ಟಾಗಿ ಕಾರ್ಯಕ್ರಮ ಬೂತ್ ಮಟ್ಟದಲ್ಲಿ ನಡೆಸಬೇಕೆಂದರು. ಶಾಸಕರಾದ ಲಾಲಾಜಿ ಮೆಂಡನ್ ಮಾತನಾಡಿ ಕ್ಷೇತ್ರಾದ್ಯಂತ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿ ಕೊಡಿಬೆಟ್ಟು ಪಂಚಾಯತ್ ಗೂ ಸಾಕಷ್ಟು ಅನುದಾನ ನೀಡಿದ್ದು ಮುಂದೆಯೂ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು ಮಾತನಾಡಿ ನಮ್ಮದೇ ಆಡಳಿತ ಇರುವ ಪಂಚಾಯತ್ ಗೆ ಕಾರ್ಯಕರ್ತರು ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನಮ್ಮನ್ನು ಸಂಪರ್ಕಿಸಬೇಕು ಎಂದರು.
ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರಾದ ಆಶಾ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಶಕ್ತಿ ಕೇಂದ್ರ ಪ್ರಮುಖರಾದ ಅರುಣ್ ಶೆಟ್ಟಿ, ಶ್ರೀನಿವಾಸ ಪೂಜಾರಿ, ಪಂಚಾಯತ್ ಸದಸ್ಯರುಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ಆರ್ ಎಸ್ ಬಿ ಸಂಘದ ವಿಷ್ಣು ತೆಂಡೂಲ್ಕರ್ ಇವರನ್ನು ಗೌರವಿಸಲಾಯಿತು.