Design a site like this with WordPress.com
Get started

ಪೆರ್ಣಂಕಿಲದಲ್ಲಿ ಜನಜಾಗ್ರತಿ‌ ಸಮಿತಿ ಉದ್ಘಾಟನೆ

ಸಂಘಟನೆ ಮುಖಾಂತರ ಜಾಗ್ರತ ಸಮಾಜ – ಶ್ರೀಕಾಂತ ನಾಯಕ್ ಪೆರ್ಣಂಕಿಲದಲ್ಲಿ ನೂತನವಾಗಿ ಜನಜಾಗ್ರತಿ‌ ಸಮಿತಿ ಉದ್ಘಾಟನಾ ಕಾರ್ಯಕ್ರಮ‌ ನಡೆಯಿತು. ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕೊಡಿಬೆಟ್ಟು ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು ಜಂಟಿಯಾಗಿ‌ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಶ್ರೀಕಾಂತ ನಾಯಕ್, ಗ್ರಾಮೀಣ ಪ್ರದೇಶಗಳಲ್ಲಿ ಜಾಗ್ರತ ಸಮಾಜ ನಿರ್ಮಾಣಕ್ಕೆ ಇಂತಹ ಸಂಸ್ಥೆಗಳ ಅಗತ್ಯವಿದೆ, ಸಮಾಜದ ಎಲ್ಲ ಆಗು ಹೋಗುಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಲ್ಲಿ ಊರಿನ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ ಎಂದರು. ಪ್ರಸ್ತಾವನೆ ಮಾಡಿದContinue reading “ಪೆರ್ಣಂಕಿಲದಲ್ಲಿ ಜನಜಾಗ್ರತಿ‌ ಸಮಿತಿ ಉದ್ಘಾಟನೆ”

ಇಂದ್ರಾಳಿಯಲ್ಲಿ ಬುಡೋಕಾನ್ ಕರಾಟೆ ಎಂಡ್ ‌ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ನೂತನ ತರಬೇತಿ ಕೇಂದ್ರ ಉದ್ಘಾಟನೆ

ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಉಡುಪಿ ಇದರ ನೂತನ ತರಬೇತಿ ಕೇಂದ್ರವು ಇಂದ್ರಾಣಿ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು. ಬುಡೊಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ಮುಖ್ಯ ಶಿಕ್ಷಕ ರೆಂಷಿ ವಾಮನ್ ಪಾಲನ್ ಸಂಸ್ಥೆಯ ಪರಿಚಯವನ್ನು ನೀಡಿ ಕರಾಟೆ ಕಲೆಯ ಮಹತ್ವವನ್ನು ವಿವರಿಸಿದರು. ಇಂದ್ರಾಳಿಯ ನೂತನ ಕರಾಟೆ ತರಗತಿ ಕೇಂದ್ರವನ್ನು ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿ, ಪ್ರಸಕ್ತ ದಿನಗಳಲ್ಲಿ ಕರಾಟೆContinue reading “ಇಂದ್ರಾಳಿಯಲ್ಲಿ ಬುಡೋಕಾನ್ ಕರಾಟೆ ಎಂಡ್ ‌ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ನೂತನ ತರಬೇತಿ ಕೇಂದ್ರ ಉದ್ಘಾಟನೆ”

ಕಾಪು ಕ್ಷೇತ್ರ ಕಟಪಾಡಿ ಬೂತ್ ನಂಬರ್ 91 ರ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಾಮಫಲಕ ಅನಾವರಣ

ಕಾಪು ಕ್ಷೇತ್ರದ ಕಟಪಾಡಿ ಪಂಚಾಯತ್ ಮೂಡಬೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ 91 ನೇ ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ‌ ಇವರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು. ಆಗಮಿಸುತ್ತಿದ್ದಂತೆ ರಾಜ್ಯಾಧ್ಯಕ್ಷರನ್ನು ಬೂತ್ ಅಧ್ಯಕ್ಷರು ಹಾರಾರ್ಪಣೆ ಮಾಡಿ ಸ್ವಾಗತಿಸಿದರೆ, ಮಹಿಳೆಯರಿಂದ ಆರತಿ‌ಬೆಳಗಿಸಿ ಚಂಡೆ ಹಾಗೂ ಪೂರ್ಣಕುಂಭದೊಡನೆ ಮನೆ ತನಕ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ನಾಮಫಲಕ ಅಳವಡಿಸುವ ಮೊದಲು ಗೋಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪುContinue reading “ಕಾಪು ಕ್ಷೇತ್ರ ಕಟಪಾಡಿ ಬೂತ್ ನಂಬರ್ 91 ರ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಾಮಫಲಕ ಅನಾವರಣ”

ಮತಾಂತರ ಮತ್ತು ಆಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ :ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ, ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋ ಕಳ್ಳತನ ಮತ್ತು ಆಕ್ರಮ ಗೋ ಸಾಗಾಟನ್ನು ಸಹಿಸಲಾಗುವುದಿಲ್ಲ. ಜಿಲ್ಲಾಡಳಿತ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.Continue reading “ಮತಾಂತರ ಮತ್ತು ಆಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು: ಕುಯಿಲಾಡಿ ಸುರೇಶ್ ನಾಯಕ್”

ಗುಜರಾತ್‌ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್‌ ರಾಜೀನಾಮೆ

Breaking News : ಗಾಂಧೀನಗರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಂಗತಿಯನ್ನು ಘೋಷಿಸಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ. ಐದು ವರ್ಷಗಳ ಕಾಲ ರಾಜ್ಯದ ಸೇವೆ ಮಾಡಲು ಪಕ್ಷ ನನಗೆ ಅವಕಾಶ ನೀಡಲಾಗಿದೆ. ನನ್ನ ಪಕ್ಷ ಏನು ಹೇಳಿದರೂ ಅದನ್ನು ನಾನು ಮಾಡುತ್ತೇನೆ ಎಂದು ರೂಪಾನಿ ಸುದ್ದಿಗಾರರಿಗೆ ತಿಳಿಸಿದರು.Continue reading “ಗುಜರಾತ್‌ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್‌ ರಾಜೀನಾಮೆ”

ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ

ಕಾಪು: ಇಂದು ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು ಇವರ ಅಧ್ಯಕ್ಷತೆಯಲ್ಲಿ ಕಳತ್ತೂರು ಗುರ್ಮೆ ಸುರೇಶ್ ಶೆಟ್ಟಿ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಾಶಕ್ತಿಕೇಂದ್ರದ ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ನೀಡಲಾಯಿತು. ಕಾಪು ಮಂಡಲದ ಕಾರ್ಯದರ್ಶಿ, ಕುತ್ಯಾರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲತಾ ಅಚಾರ್ಯ ಸ್ವಾಗತಿಸಿದರು .ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿContinue reading “ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ”