ಕಾಂಗ್ರೆಸ್ ನಾಯಕ ಸರಳ ಸಜ್ಜನ ರಾಜಕಾರಣಿ ಮಾಜಿ ಕೇಂದ್ರ ಸಚಿವರಾಗಿರುವ ಒಸ್ಕರ್ ಫೆರ್ನಾಂಡಿಸ್ ಅವರು ಇಂದು ವಿಧಿವಶರಾದರು.ಅವರ ಆತ್ಮಕ್ಕೆ ಚಿರಶಾಂತಿ ಸದ್ಗತಿ ದೊರೆಯಲೆಂದು ಬಿಜೆಪಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಅದ್ಯಕ್ಷ ಶ್ರೀಕಾಂತ್ ನಾಯಕ್ .ಸುರೇಶ್ ಶೆಟ್ಟಿ ಗುರ್ಮೆ ,ಶಿಲ್ಪಾ ಜಿ ಸುವರ್ಣ, ನಯನ ಗಣೇಶ್ ,ರಾಧಾಕೃಷ್ಣ ಬೋಳ್ಜೆ,ವಿಜಯ ಕುಮಾರ್ ಉದ್ಯಾವರ,ರವಿ ಕೋಟ್ಯಾನ್ ಪಡುಕರೆ,ರಾಜೇಶ್ ಕುಂದರ್,ಸಚಿನ್ ಪೀತ್ರೋಡಿ, ಸಚಿನ್ ಬೊಳ್ಜೆ,ಸತೀಶ್ ಬಿರಪಾಡಿ ಉದ್ಯಾವರ ಗ್ರಾಮ ಪಂಚಾಯತ್Continue reading “ಆಸ್ಕರ್ ನಿಧನಕ್ಕೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಸಂತಾಪ”
Daily Archives: September 13, 2021
ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಕುಯಿಲಾಡಿ ಸಂತಾಪ
ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ರವರ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯೋಗಾಭ್ಯಾಸದಲ್ಲಿ ವಿಶೇಷ ಪರಿಜ್ಞಾನ ಹೊಂದಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಫೆರ್ನಾಂಡಿಸ್ ರವರು ಸ್ನೇಹಜೀವಿಯಾಗಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ
ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. , ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್,Continue reading “ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ”