
ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ, ಪುರಸಭಾ ನಾಮನಿರ್ದೇಶಿತ ಸದಸ್ಯರಾದ ಚಂದ್ರ ಮಲ್ಲಾರ್ ಇವರು ಮೋದೀಜಿ ಜನ್ಮದಿನದಂದು ಪ್ರತೀ ವರ್ಷ 5 ಕಿಮೀ ವ್ಯಾಪ್ತಿಯಲ್ಲಿ ತನ್ನ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರಯಾಣ ಒದಗಿಸುತ್ತಿದ್ದು ನಿನ್ನೆಯ ದಿನ ಬೆಳಿಗ್ಗೆ ಅದರ ಚಾಲನಾ ಕಾರ್ಯಕ್ರಮನಡೆಸಲಾಯಿತು. ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿಯ ಆದರ್ಶ ವ್ಯಕ್ತಿತ್ವ ಕೊಂಡಾಡಿ ಚಂದ್ರ ಮಲ್ಲಾರ್ ನೀಡುತ್ತಿರುವ ಉಚಿತ ಸೇವೆ ನಮ್ಮೆಲ್ಲರಿಗೂ ಆದರ್ಶವಾಗಿದ್ದು ನಾವೆಲ್ಲರೂ ಯಾವುದಾದರೊಂದು ಸೇವಾ ಚಟುವಟಿಕೆಯಲ್ಲಿ ಭಾಗವಹಿಸಿ ಮೋದೀಜಿಗೆ ಶುಭಕೋರಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, ಪಕ್ಷದ ಪ್ರಮುಖರಾದ ಗಂಗಾಧರ ಸುವರ್ಣ, ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.