ಅಲೆವೂರು ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ

ಅಲೆವೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಮತ್ತು ಸಮರ್ಪಣೆಯ ಕಾರ್ಯಕ್ರಮದಡಿಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆದು ಇದರಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ‌ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಮೋದೀಜಿಯವರ ಜನ್ಮದಿನದ ಅಂಗವಾಗಿ‌ ಪಕ್ಷ ನೀಡಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮೋದೀಜಿಯವರು ಮಾಡಿದ ಸಾಧನೆಗಳ ಬಗ್ಗೆ ವಿವರಿಸುತ್ತ ದೇಶಕ್ಕಾಗಿ ಸರ್ವಸ್ವವನ್ನು ಮೀಸಲಿಟ್ಟ ಇಂತಹ ವ್ಯಕ್ತಿ ನಮ್ಮ ಪಕ್ಷದಲ್ಲಿರುವುದು ನಮ್ಮ ಹೆಮ್ಮೆ ಹಾಗಾಗಿ ಅವರ ಆದರ್ಶಗಳನ್ನು ನಾವು‌ ಪಾಲಿಸುತ್ತ ಸೇವೆ ಮತ್ತು ಸಮರ್ಪಣಾ ಭಾವದಿಂದ ದೇಶ ಸೇವೆ ಜಾಗೂ ಸಮಾಜಸೇವೆಗೆ ತೊಡಗಬೇಕು ಎಂದರು.

ಕೊರಂಗ್ರಪಾಡಿ ಶಕ್ತಿಕೇಂದ್ರ ಪ್ರಮುಖ್ ಆಶಿಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಅಲೆವೂರು ಉಪಸ್ಥಿತರಿದ್ದರು. ಅಲೆವೂರು ಶಕ್ತಿಕೇಂದ್ರ ಪ್ರಮುಖ್ ಶೇಖರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ ಸೇರಿಗಾರ್, ಬೇಬಿ ರಾಜೇಶ್, ರಮಾ ಜೆ ರಾವ್ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started