
ಉಡುಪಿ:ಸೆ.17ರಂದು ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯಿಂದ ಮೊದಲ್ಗೊಂಡು ಅ.7ರಂದು ಅವರು ಚುನಾಯಿತ ಸರಕಾರದ ನೇತೃತ್ವ ವಹಿಸಿ 20 ವರ್ಷಗಳು ತುಂಬುವ ದಿನದ ಸವಿ ನೆನಪಿಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರವರು ದೇಶದಾದ್ಯಂತ ಘೋಷಿಸಿರುವ 20 ದಿನಗಳ ಸೇವೆ ಮತ್ತು ಸಮರ್ಪಣ ಅಭಿಯಾನದ ಎಲ್ಲಾ 9 ಸೇವಾ ಕಾರ್ಯಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಆಯೋಜಿಸಿ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಸೇವೆ ಮತ್ತು ಸಮರ್ಪಣ ಅಭಿಯಾನದ ಜಿಲ್ಲಾ ಸಂಚಾಲಕರು, ಒಂಬತ್ತು ಕಾರ್ಯಕ್ರಮಗಳ ಜಿಲ್ಲಾ ಮತ್ತು ಮಂಡಲ ಸಂಚಾಲಕರು ಮತ್ತು ಬಿಜೆಪಿ ಜಿಲ್ಲಾ ಕಾರ್ಯತಂಡದ ಗೂಗಲ್ ಮೀಟ್ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ ದಿನಾಚರಣೆಯ ಅಂಗವಾಗಿ ನಡೆದ ಸೇವಾ ಕಾರ್ಯಗಳ ಮೂಲಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಸೇವೆ ಮತ್ತು ಸಮರ್ಪಣೆ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಆರು ಮಂಡಲಗಳ ವ್ಯಾಪ್ತಿಯಲ್ಲಿ ವಿವಿಧ ವಿಭಾಗಗಳ ಸೇವಾ ಕಾರ್ಯಗಳು ವೇಗ ಪಡೆದಿವೆ.
ಈ ಅಭಿಯಾನದ ಅಂಗವಾಗಿ ಸೆ.25ರಂದು ಏಕಾತ್ಮ ಮಾನವ ವಾದದ ಪ್ರತಿಪಾದಕ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ಬೂತ್ ಗಳಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಿವಿಧ ಸೇವಾ ಕಾರ್ಯಗಳನ್ನು ಆಯೋಜಿಸುವ ಮೂಲಕ ಅವಿಸ್ಮರಣೀಯವಾಗಿ ಆಚರಿಸುವ ಗುರಿ ಹೊಂದಲಾಗಿದೆ. ಈ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ನಡೆಯುವ ರಕ್ತದಾನ ಶಿಬಿರವನ್ನು ಉದ್ಘಾಟಿಸುವ ಮೂಲಕ ಜಿಲ್ಲೆಯಾದ್ಯಂತ ಆಚರಣೆಗೆ ಚಾಲನೆ ನೀಡಲಿದ್ದಾರೆ.
ಸೇವೆ ಮತ್ತು ಸಮರ್ಪಣ ಅಭಿಯಾನದ ಈ ಕೆಳಗಿನ ಎಲ್ಲಾ 9 ವಿಧದ ಸೇವಾ ಚಟುವಟಿಕೆಗಳನ್ನು ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಮಟ್ಟಕ್ಕೆ ತಲುಪಿಸುವ ಮೂಲಕ ಸಂಘಟಿತ ಪ್ರಯತ್ನ ಮತ್ತು ಬದ್ಧತೆಯಿಂದ ಜಿಲ್ಲೆಯಲ್ಲಿ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕುಯಿಲಾಡಿ ಹೇಳಿದರು.
* ಬೂತ್ ಮಟ್ಟದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ, ನಮೋ ಆಪ್ ಸೇವೆ ಬಳಕೆ, ಪ್ರತಿಜ್ಞಾ ವಿಧಿ ಸ್ವೀಕಾರ ಇತ್ಯಾದಿ
* ಪರಿಸರ ಸ್ನೇಹಿ ಕಾರ್ಯದಲ್ಲಿ ನದಿ-ಕೆರೆ ಸ್ವಚ್ಛತೆ, ಪ್ಲಾಸ್ಟಿಕ್ ಮುಕ್ತ ಅಭಿಯಾನ, ಸಸಿ ನೆಡುವುದು ಇತ್ಯಾದಿ
* ಆರೋಗ್ಯ ಚಟುವಟಿಕೆಗಳಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ಲಸಿಕೆ ವಿತರಣಾ ಅಭಿಯಾನ ಇತ್ಯಾದಿ
* ಸೇವಾ ಕಾರ್ಯಗಳಲ್ಲಿ ಆಸ್ಪತ್ರೆ ಹಾಗೂ ಅನಾಥಾಶ್ರಮಗಳಲ್ಲಿ ಹಣ್ಣು ಹಂಪಲು ವಿತರಣೆ, ಅಂಧರಿಗೆ ನೆರವು, ಪಡಿತರ ಚೀಲ ವಿತರಣೆ ಇತ್ಯಾದಿ
* ಪ್ರಚಾರ ಕಾರ್ಯದಲ್ಲಿ ಪ್ರದರ್ಶನಗಳು, ಸಭೆಗಳು, ಇ-ಸಂವಾದ, ವಿಚಾರ ಸಂಕಿರಣ, ಹೋರ್ಡಿಂಗ್ಸ್ ಇತ್ಯಾದಿ
* ಮಾಧ್ಯಮ ವಿಭಾಗದಲ್ಲಿ ಲೇಖನ, ಪ್ಯಾನಲ್ ಚರ್ಚೆ, ಕ್ಲಬ್ ಹೌಸ್ ಚಟುವಟಿಕೆ ಇತ್ಯಾದಿ
* ಸಾಮಾಜಿಕ ಜಾಲತಾಣದ ಮೂಲಕ ವಿವಿಧ ಯೋಜನೆಗಳ ಫಲಾನುಭವಿಗಳ ಹೇಳಿಕೆ, ಇನ್ಫೋಗ್ರಾಫಿಕ್ಸ್ ಇತ್ಯಾದಿ
* ಸೆ.25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಆಚರಣೆ
* ಅ.2ರಂದು ಗಾಂಧಿ ಜಯಂತಿ ಆಚರಣೆ
ಜಿಲ್ಲಾ ಬಿಜೆಪಿಯ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಡೆಯುತ್ತಿರುವ “ಸೇವೆ ಮತ್ತು ಸಮರ್ಪಣ ಅಭಿಯಾನ”ವನ್ನು ವ್ಯವಸ್ಥಿತವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಬಿಜೆಪಿ ಸೂಚನೆಯಂತೆ ನೇಮಕಗೊಂಡಿರುವ ಅಭಿಯಾನದ ಜಿಲ್ಲಾ ಸಂಚಾಲಕರು, ಜಿಲ್ಲಾ ಕಾರ್ಯಕ್ರಮಗಳ ಸಂಚಾಲಕರು ಮತ್ತು ಮಂಡಲ ಕಾರ್ಯಕ್ರಮಗಳ ಸಂಚಾಲರು ಹಾಗೂ ಬಿಜೆಪಿ ಉಡುಪಿ ನಗರ, ಉಡುಪಿ ಗ್ರಾಮಾಂತರ, ಕಾಪು, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಂಘಟಿತ ಶ್ರಮ ಅಭಿನಂದನೀಯ ಎಂದು ಕುಯಿಲಾಡಿ ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿಯವರು ಸೇವೆ ಮತ್ತು ಸಮರ್ಪಣ ಅಭಿಯಾನದ ಸೇವಾ ಚಟುವಟಿಕೆಗಳ ಪರಿಣಾಮಕಾರಿ ಆಯೋಜನೆ ಮತ್ತು ದೈನಂದಿನ ಚಟುವಟಿಕೆಗಳ ವರದಿ ನೀಡುವ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.
ಸೇವೆ ಮತ್ತು ಸಮರ್ಪಣ ಅಭಿಯಾನದ ಜಿಲ್ಲಾ ಸಂಚಾಲಕರಾದ ಸದಾನಂದ ಉಪ್ಪಿನಕುದ್ರು ಮತ್ತು ಶಿವಕುಮಾರ್ ಅಂಬಲಪಾಡಿ ಸೆ.17ರಿಂದ ಜಿಲ್ಲೆಯಾದ್ಯಂತ ನಡೆದ ಮಂಡಲವಾರು ಸಭೆಗಳು ಹಾಗೂ ಸೇವಾ ಚಟುವಟಿಕೆಗಳ ವರದಿ ಮಂಡಿಸಿದರು.
ಸೇವೆ ಮತ್ತು ಸಮರ್ಪಣ ಅಭಿಯಾನದ 9 ಕಾರ್ಯಕ್ರಮಗಳ ಜಿಲ್ಲಾ ಸಂಚಾಲಕರುಗಳಾದ ಶ್ರೀಶ ನಾಯಕ್ ಪೆರ್ಣಂಕಿಲ, ಸುವರ್ಧನ್ ನಾಯಕ್, ಪ್ರವೀಣ್ ಕುಮಾರ್ ಗುರ್ಮೆ, ವಿಖ್ಯಾತ್ ಶೆಟ್ಟಿ, ಗಿರೀಶ್ ಎಮ್. ಅಂಚನ್, ಡಾ! ರಾಮಚಂದ್ರ ಕಾಮತ್, ರೇಶ್ಮಾ ಉದಯ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ, ಶ್ರೀನಿಧಿ ಹೆಗ್ಡೆ, ರಘುವೀರ್ ಶೆಣೈ, ಚಂದ್ರಶೇಖರ ಪ್ರಭು, ಪ್ರಭಾಚಂದ್ರ, ಕಿಶೋರ್ ಕುಮಾರ್, ಸವಿತಾ ಶಿವಾನಂದ ಕೋಟ್ಯಾನ್, ಸುನೀತಾ ನಾಯ್ಕ್, ಮಾಲತಿ ನಾಯ್ಕ್, ಸುಪ್ರಸಾದ್ ಶೆಟ್ಟಿ, ರವೀಂದ್ರ ಮಡಿವಾಳ, ಪ್ರಮೀಳಾ ಹರೀಶ್, ನಯನಾ ಗಣೇಶ್ ಹಾಗೂ ಕಾರ್ಯಕ್ರಮಗಳ ಮಂಡಲ ಸಂಯೋಜಕರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಕಾರ್ಯಕ್ರಮದ ಜಿಲ್ಲಾ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ವಂದಿಸಿದರು.